ಬೆಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಇಂದು (ಡಿ.09) ಬೆಳ್ಳಂ ಬೆಳಿಗ್ಗೆ ಕರ್ನಾಟಕ ಸೇರಿದಂತೆ ದೇಶದ ವಿವಿಧ ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ. ಎನ್ಐಎ ಅಧಿಕಾರಿಗಳು ಬೆಂಗಳೂರಿನಲ್ಲೂ ದಾಳಿ ನಡೆಸಿದ್ದು, ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಶಂಕಿತ ಉಗ್ರರು ಐಸಿಸ್ ಜೊತೆ ನಂಟು ಹೊಂದಿದ್ದಾರೆ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಎನ್ಐಎ ದಾಳಿ ನಡೆಸಿದೆ.
ಈ ಹಿಂದೆ ಜುಲೈನಲ್ಲಿ ಪುಣೆ ಪೊಲೀಸರಿಂದ ಇಬ್ಬರ ಬಂಧನವಾಗಿತ್ತು. ಅಮೀರ್ ಅಬ್ದುಲ್ ಹಮೀದ್ ಖಾನ್. ಮೊಹಮ್ಮದ್ ಯಾಕೂಬ್ ಸಾಕಿ ಬಂಧಿತರಾಗಿದ್ದರು. ವಿಚಾರಣೆ ವೇಳೆ ಇಬ್ಬರೂ ಐಸಿಸ್ ಸಂಪರ್ಕದಲ್ಲಿರುವದು ಪತ್ತೆಯಾಗಿದೆ. ಜೊತೆಗೆ ಮಹಾರಾಷ್ಟ್ರದಲ್ಲಿ ವಿಧ್ವಂಸಕ ಕೃತ್ಯ ಎಸಗಲೂ ಸಂಚು ರೂಪಿಸಿದ್ದರು. ಈ ಹಿನ್ನೆಲೆಯಲ್ಲಿ ಎಟಿಎಸ್ ಅಧಿಕಾರಿಗಳು ತನಿಖೆ ಆರಂಭಿಸಿದ್ದರು. ಶಂಕಿತ ಉಗ್ರರು ಕರ್ನಾಟಕ-ಮಹಾರಾಷ್ಟ್ರ ಗಡಿಯ ಅಂಬೋಲಿ ಅರಣ್ಯ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಿದ್ದರು ಎಂಬ ಅಂಶ ಬಯಲಾಗಿತ್ತು. ಹೀಗಾಗಿ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಇಬ್ಬರು ಶಂಕಿತ ಉಗ್ರರ ಬಂಧಿಸಿದ ಎನ್ಐಎ
