5 ಕೆಜಿ ಅಕ್ಕಿ ಜೊತೆ ಖಾತೆಗೆ ಹಣ ವರ್ಗಾವಣೆ
ಬೆಂಗಳೂರು: ಇಂದಿನಿAದ ಕರ್ನಾಟಕದಲ್ಲಿ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಜೊತೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುತ್ತೇವೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಕೆಜಿ ಅಕ್ಕಿ ಜೊತೆ ಉಳಿದ 5 ಕೆಜಿ ಅಕ್ಕಿ ಬದಲಿಗೆ 170 (ಪ್ರತಿ ಕೆ.ಜಿಗೆ 34) ನೀಡುತ್ತೇವೆ. 90 ಪರ್ಸೆಂಟ್ ಅಕೌಂಟ್ ಇದ್ದಾವೆ. ಅಕೌಂಟ್ ಇಲ್ಲದವರು ಮಾಡಿಸಬೇಕು. ಒಬ್ಬರಿಗೆ 170 ರೂಪಾಯಿ ಕೊಡುತ್ತೇವೆ. ಅಕ್ಕಿ ಸಿಗುವರೆಗೆ ಮಾತ್ರ ಈ ಹಣ ನೀಡುತ್ತೇವೆ ಎಂದರು.
ಹೆಚ್ಚುವರಿ 5 ಕೆಜಿ ಅಕ್ಕಿ ಸಿಗುವವರೆಗೂ ಖಾತೆಗೆ ಹಣ ಜಮೆ ಮಾಡುತ್ತೇವೆ. ಎಂಎಸ್ ಪಿ ಮೂಲಕ ಧಾನ್ಯ ಖರೀದಿ ಮಾಡುತ್ತೇವೆ. ಎರಡು ಕೆಜಿ, ಜೋಳ/ರಾಗಿ ಕೊಡುತ್ತೇವೆ. ಎಂಟು ಕೆಜಿ ಅಕ್ಕಿ ಕೊಡುತ್ತೇವೆ. ಅಕ್ಕಿ ಕೊಡಲು ನಾವು ಸಿದ್ದವಾಗಿದ್ದೇವೆ ಆದ್ರೆ ಕೇಂದ್ರ ಅಕ್ಕಿ ಕೊಟ್ಟಿಲ್ಲ. ಈಗಾಗಲೇ ಈ ಬಗ್ಗೆ ನಿಮಗೆ ಗೊತ್ತಿದೆ. ಅಕ್ಕಿ ಸಿಕ್ಕ ಬಳಿಕ ಅಕ್ಕಿ ಕೊಡುತ್ತೇವೆ. ಸಿಎಂ ಕೂಡ ಧಾನ್ಯ ಕೊಡುತ್ತೇವೆ ಎಂದಿದ್ದಾರೆ. ಅದರಂತೆ ದಕ್ಷಿಣದಲ್ಲಿ ರಾಗಿ ಕೊಡುತ್ತೇವೆ. ಉತ್ತರದಲ್ಲಿ ಜೋಳ ಕೊಡುತ್ತೇವೆ. ರಾಗಿ ದಾಸ್ತಾನು ಇದೆ, ಜೋಳ ದಾಸ್ತಾನು ಇಲ್ಲ. ದಾಸ್ತಾನು ಆದ ಬಳಿಕ ಧಾನ್ಯಗಳ ಹಂಚಿಕೆ ಮಾಡುತ್ತೇವೆ. ಎಂಎಸ್ ಪಿ ಮೂಲಕ ಧಾನ್ಯ ಖರೀದಿ ಮಾಡುತ್ತೇವೆ. ಎರಡು ಕೆಜಿ, ಜೋಳ/ರಾಗಿ ಕೊಡುತ್ತೇವೆ. ಎಂಟು ಕೆಜಿ ಅಕ್ಕಿ ಕೊಡುತ್ತೇವೆ. ಮಾತು ಕೊಟ್ಟಂತೆ ಜುಲೈ 1ರಿಂದ ಯೋಜನೆ ಜಾರಿ ಆಗುತ್ತೆ ಎಂದು ಸ್ಪಷ್ಟಪಡಿಸಿದರು.