ಮೈಸೂರು:- ಎಂಎಲ್ಸಿ ಮಂಜೇಗೌಡ ತಾವು ನಿರ್ಮಿಸಿದ ಬಡಾವಣೆಯೊಂದರ ಪಾರ್ಕ್ ಜಾಗವನ್ನೇ ನಿವೇಶನವನ್ನಾಗಿ ಪರಿವರ್ತಿಸಿ ಮಾರಾಟ ಮಾಡಿದ್ದಾರೆ. ಇವರ ವಿರುದ್ಧ ಮುಡಾ ಅಧ್ಯಕ್ಷ ಕೆ ಮರೀಗೌಡ ಕ್ರಮ ಕೈಗೊಳ್ಳುತ್ತಾರಾ? ಎಂದು ಎಚ್ ವಿಶ್ವನಾಥ್ ಸವಾಲು ಹಾಕಿದರು.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎ ಸೈಟ್ ಮತ್ತು ಪಾರ್ಕ್ ಗಳು ಮುಡಾದ ಆಸ್ತಿಗಳು. ಇವನ್ನು ಕೂಡ ಕೆಲವರು ಮಾರಾಟ ಮಾಡಿದ್ದಾರೆ. ಇವರೆಲ್ಲ ಸೇರಿಕೊಂಡು ಸಿದ್ದರಾಮಯ್ಯರನ್ನು ದಿವಾಳಿ ಮಾಡುತ್ತಿದ್ದಾರೆ. ನಾನು ಪ್ರಾಮಾಣಿಕವಾಗಿ ಬದುಕುತ್ತಿದ್ದೇನೆ. ಇದೇ ಮಾತನ್ನು ನೀವು ಹೇಳುತ್ತೀರಾ? ಎಂದು ಎಚ್ ವಿಶ್ವನಾಥ್ ಪ್ರಶ್ನಿಸಿದರು.ಎಲ್ಲಾ ಕಾನೂನು ಬದ್ದವಾಗಿ ನಡೆದಿದ್ದರೇ ಸರ್ಕಾರ ತನಿಖೆಗೆ ಏಕೆ ವಹಿಸಿದೆ? ಎಂದು ಪ್ರಶ್ನೆ. ಎಲ್ಲಾ ಕಾನೂನು ಬದ್ದವಾಗಿ ನಡೆದಿದೆ ಎಂದಿರುವ ಸಚಿವ ಡಾ ಹೆಚ್ ಸಿ ಮಹದೇವಪ್ಪ ವಿರುದ್ಧ ವಿಶ್ವನಾಥ್ ವಾಗ್ದಾಳಿ ನಡೆಸಿದರು.ಬದಲಿ ನಿವೇಶನ ಪಡೆದಿದ್ದೇನೆ ಎಂದು ನನ್ನ ವಿರುದ್ಧ ಆರೋಪಿಸಿದ್ದಾರೆ. ಮುಡಾದ ಅಕ್ರಮದಲ್ಲಿ ನನ್ನ ಪಾಲು ಇದೆ ಎಂದಿದ್ದಾರೆ. ನನ್ನ ಪತ್ನಿಗೆ ದೇವನೂರು 3ನೇ ಹಂತದಲ್ಲಿ ನೀಡಿದ್ದ ನಿವೇಶನದ ಬಳಿ ವರುಣ ನಾಲೆ ಹಾದು ಹೋಗಿದೆ. ಆ ಸ್ಥಳ ಮನೆ ನಿರ್ಮಿಸಲು ಯೋಗ್ಯವಾಗಿರಲಿಲ್ಲ. ಹಾಗಾಗಿ ಬೇರೆಡೆ ನಿವೇಶನ ನೀಡಿದ್ದಾರಷ್ಟೇ. ಎಲ್ಲರೂ ಸೇರಿಕೊಂಡು ಹಗರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ. ಹಾಗಾಗಿ ಮುಡಾದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಇದು ದೊಡ್ಡ ಕರ್ಮಕಾಂಡವಾಗಿದೆ. ನನ್ನ ವಿರುದ್ಧ ಆರೋಪ ಮಾಡಿರುವ ಮುಡಾದ ಅಧ್ಯಕ್ಷ ಓರ್ವ ಮೂಢ. ಶಾಸಕ ಕೆ ಹರೀಶ್ ಗೌಡ ನೀಡಿರುವ ಹೇಳಿಕೆ ಸರಿಯಲ್ಲ ಎಂದರು.ಈ ವಿಚಾರದಲ್ಲಿ ಮುಡಾದವರು, ಸಚಿವರು ಬಾಯಿಗೆ ಬಂದಂತೆ ಮಾತನಾಡದಂತೆ ಸಿಎಂ ಸಿದ್ದರಾಮಯ್ಯ ಸೂಚಿಸಬೇಕು ಎಂದು ತಿಳಿಸಿದರು.