ಕೆ.ಆರ್.ಪೇಟೆ:- ತಾಲ್ಲೂಕು ಕಾಂಗ್ರೆಸ್ ಮುಖಂಡರಿಂದ ಒಗ್ಗಟ್ಟು ಪ್ರದರ್ಶನ ಪುರಾಣ ಪ್ರಸಿದ್ಧ ಬಯಲುಸೀಮೆ ಕುಕ್ಕೆ ಸುಬ್ರಹ್ಮಣ್ಯ ಎಂದೇ ಖ್ಯಾತಿ ಪಡೆದಿರುವ ಶ್ರೀ ಕ್ಷೇತ್ರ ಸಾಸಲು ಶಂಭುಲಿಂಗೇಶ್ವರ ಸನ್ನಿಧಿಯಿಂದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.
ತಾಲ್ಲೂಕಿನ ದಕ್ಷ ಪ್ರಾಮಾಣಿಕ ರಾಜಕಾರಣಿ ಬಿ.ಎಲ್.ದೇವರಾಜು ಗೆಲ್ಲಿಸುವಂತೆ ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್, ಬಿ.ನಾಗೇಂದ್ರಕುಮಾರ್, ಎಂ.ಡಿ.ಕೃಷ್ಣಮೂರ್ತಿ ಮತದಾರರಲ್ಲಿ ಮನವಿ ಮಾಡಿದರು.
ತಾಲ್ಲೂಕಿನಲ್ಲಿ ಸ್ವಚ್ಚ ಪಾರದರ್ಶಕ ಆಡಳಿತಕ್ಕಾಗಿ, ಸರ್ಕಾರಿ ಕಚೇರಿಗಳಲ್ಲಿ ಅಭಿವೃದ್ದಿಯ ವೇಗ ಹೆಚ್ಚಿಸಲು ಕಾಂಗ್ರೆಸ್ ಅಭ್ಯರ್ಥಿ ಬಿ.ಎಲ್.ದೇವರಾಜು ಗೆಲ್ಲಿಸುವಂತೆ ಒಕ್ಕೂರಲಿನ ಮನವಿ.