ಮೈಸೂರು: ನಗರದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಶಾಸಕ ಹರೀಶ್ಗೌಡ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ವಾಲ್ಮೀಕಿಯವರು ಒಂದು ಜಾತಿಗೆ ಸೀಮಿತವಾಗಿಲ್ಲ. ಎಲ್ಲಾ ಸಮುದಾಯಕ್ಕೂ ಸಂದೇಶ ಸಾರುವ ರಾಮಾಯಣವನ್ನು ನಮಗೆ ಕೊಟ್ಟಿದ್ದಾರೆ. ಅಂತಹ ಸಂತರ ಜಯಂತಿಯನ್ನು ಸರ್ಕಾರ ಆಚರಿಸುವ ಮೂಲಕ ಅವರ ಆದರ್ಶ ಇತರರಿಗೂ ಮಾದರಿಯಾಗುವಂತೆ ಪ್ರೇರೆಪಿಸುತ್ತಿದೆ ಎಂದು ಹೇಳಿದರು.
ಕೆಪಿಸಿಸಿ ಮಾದ್ಯಮ ವಕ್ತಾರ ಎಂ.ಲಕ್ಷ್ಮಣ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಪ್ರಧಾನ ಕಾರ್ಯದರ್ಶಿ ಎಂ.ಶಿವಣ್ಣ, ಕಾರ್ಯದರ್ಶಿ ಈಶ್ವರ ಚಂದ್ರಚಕ್ಕಡಿ, ಪ್ರಚಾರ ಸಮಿತಿ ಅಧ್ಯಕ್ಷ ನಾಗೇಶ್, ರವಿ ಇನ್ನಿತರರು ಉಪಸ್ಥಿತರಿದ್ದರು.