ಬೆಂಗಳೂರು: ಕಾಂಗ್ರೆಸ್ ನಾಯಕ, ಉದ್ಯಮಿ ಕೆಜಿಎಫ್ ಬಾಬು ಯಾನೆ ಯುಸೂಫ್ ಶರೀಫ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.
ಬುಧವಾರ ಬೆಳಗ್ಗೆ ಇಲ್ಲಿನ ಹೈಗ್ರೌಂಡ್ಸ್ ನಲ್ಲಿರುವ ಕೆಜಿಎಫ್ ಬಾಬು ಅವರ ನಿವಾಸಕ್ಕೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ, ಶೋಧ ಕಾರ್ಯ ಕೈಗೊಂಡಿದ್ದಾರೆAದು ವರದಿಗಳು ತಿಳಿಸಿವೆ.
ಕೆಜಿಎಫ್ ಬಾಬು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ 50 ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಇAದು ಮುಂಜಾನೆಯಿAದಲೇ ಹೈಗ್ರೌಂಡ್ಸ್ ಬಳಿಯಿರುವ ಕೆಜಿಎಫ್ ಬಾಬು ನಿವಾಸ ರುಕ್ಸಾನಾ ಪ್ಯಾಲೇಸ್ನ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ.