ಮೈಸೂರು: ಕೇರಳದಲ್ಲಿ ಕೋವಿಡ್ ರೂಪಾಂತರಿ ಜೆಎನ್.1 ಪ್ರಕರಣ ವರದಿಯಾದ ಹಿನ್ನೆಲೆ ಹೆಚ್.ಡಿ. ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೈಸೂರಿನಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಪ್ರಾಥಮಿಕ ಹಂತವಾಗಿ ಕೇರಳದಿಂದ ರಾಜ್ಯಕ್ಕೆ ಬರುವವರು ಹಾಗೂ ಕೇರಳಕ್ಕೆ ವ್ಯಾಪಾರಕ್ಕೆ ಹೋಗುವವರ ಮೇಲೆ ತೀವ್ರಾ ನಿಗಾವಹಿಸಿರುವುದು. ಹೆಚ್ಚಿನ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವ ಕುರಿತು ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಹುಣಸೂರು ಉಪ ವಿಭಾಗಾಧಿಕಾರಿ ರುಚಿ ಬಿಂದಾಸ್ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಉಪಸ್ಥಿತರಿದ್ದರು.
ಕೇರಳದಲ್ಲಿ ಕೊರೊನಾ: ಚೆಕ್ ಪೋಸ್ಟ್ ಪರಿಶೀಲಿಸಿದ ಡಿಸಿ
