ಶಿವಮೊಗ್ಗ:- ಖ್ಯಾತ ವಾಗ್ಮಿ, ಲೇಖಕ, ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ. ಕಾಂಗ್ರೆಸ್ ನಾಯಕಿಯೊಬ್ಬರು ಶಿವಮೊಗ್ಗದಲ್ಲಿ ದೂರು ದಾಖಲಿಸಿದ್ದಾರೆ.
ಶಿವಮೊಗ್ಗದಲ್ಲಿ ವಾಗ್ಮಿ, ಲೇಖಕ, ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ. ಶಿವಮೊಗ್ಗದ ವಿನೋಬನಗರ ಪೆÇಲೀಸ್ ಠಾಣೆಯಲ್ಲಿ ಸೂಲಿಬೆಲೆ ವಿರುದ್ಧ ದೂರು ದಾಖಲಿಸಲಾಗಿದೆ.
ಫೇಸ್ಬುಕ್ನಲ್ಲಿ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ್ದಾರೆ ಎಂದು ಅರೋಪಿಸಿ ದೂರು ನೀಡಲಾಗಿದೆ. ಕೆಪಿಸಿಸಿ ಸಾಮಾಜಿಕ ಜಾಲತಾಣದ ಸಂಚಾಲಕಿ ಸೌಗಂಧಿಕಾ ರಘುನಾಥ್ ಎಂಬುವರು ದೂರು ನೀಡಿದ್ದಾರೆ.
ಚಂದ್ರಯಾನ 3 ಕುರಿತಾದ ಫೇಸ್ಬುಕ್ ಪೆÇೀಸ್ಟ್ ವೇಳೆ ಚಕ್ರವರ್ತಿ ಸೂಲಿಬೆಲೆ ಅವಾಚ್ಯವಾಗಿ ಕಾಮೆಂಟ್ ಮಾಡಿದ್ದಾರೆ ಅಂತ ಸೌಂಗಧಿಕಾ ರಘುನಾಥ್ ದೂರಿದ್ದಾರೆ.
ಎಲ್ಲರೂ ದೇವಸ್ಥಾನಗಳಿಗೆ ಹೋಗಿ ಕೈಮುಗಿದು ಚಂದ್ರಯಾನ 3 ಯಶಸ್ವಿಯಾಗಲಿ, ಫೆÇೀಟೋಗಳನ್ನ ಹಾಕಿ ಎಂದು ಚಕ್ರವರ್ತಿ ಸೂಲಿಬೆಲೆ ಪೆÇೀಸ್ಟ್ ಮಾಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ, ದೇವಸ್ಥಾನಕ್ಕೆ ಪೂಜೆ ಮಾಡೋದು ತಪ್ಪಲ್ಲ. ಆದರೆ ಫೆÇಟೋ ಹಾಕಿ ಅಂತ ಹೇಳಿರೋದು ತಪ್ಪು. ವಿಜ್ಞಾನಿಗಳ ಪರಿಶ್ರಮ ಫಲಿಸಲಿ ಎಂದು ಬೇಡಿಕೊಂಡರೆ ಸಾಕು ಎಂದು ಸೌಗಂಧಿಕಾ ಕಾಮೆಂಟ್ ಮಾಡಿದ್ದರು.
ಇದಕ್ಕೆ ಚಕ್ರವರ್ತಿ ಸೂಲಿಬೆಲೆ, ?ನಿನಗೆ ಎಲ್ಲಿ ಯಾಕೆ ಉರಿ ಬಂತೋ ಗೊತ್ತಿಲ್ಲ? ಎಂದು ಕಾಮೆಂಟ್ ಹಾಕಿದ್ದರು. ಈ ಕಾರಣಕ್ಕೆ ಫೇಸ್ಬುಕ್ನಲ್ಲಿ ಅವಾಚ್ಯವಾಗಿ ಕಾಮೆಂಟ್ ಹಾಕಿದ್ದಾರೆ ಎಂದು ಸೌಗಂಧಿಕಾ ರಘುನಾತ್ ಆರೋಪಿಸಿದ್ದಾರೆ.
ಕಾಮೆಂಟ್ ಹಾಕಿದ ಬಳಿಕ ಸಾಕಷ್ಟು ಫೇಕ್ ಅಕೌಂಟ್ ಗಳಿಂದ ನನ್ನ ತೇಜೋವಧೆಗೆ ಪ್ರಯತ್ನಪಟ್ಟಿವೆ. ಆದರೆ ನಾನು ಯಾವುದಕ್ಕೂ ಸೊಪ್ಪು ಹಾಕೋದಿಲ್ಲ ಅಂತ ಸೌಗಂಧಿಕಾ ರಘುನಾಥ್ ಹೇಳಿದ್ದಾರೆ.
ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ನೀಡಿದ ಸೌಗಂಧಿಕಾ
