ಗುಂಡ್ಲುಪೇಟೆ:- ಚಾಲಕನ ಅಜಾಗರುಕತೆಯಿಂದ ಟಾಟಾ ಏಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗೊಂಡ ಘಟನೆ ಶಿವಪುರ-ಹುಂಡಿಮನೆ ಮಾರ್ಗದ ಮಧ್ಯೆ ಸೋಮವಾರ ನಡೆದಿದೆ.
ಭೀಮನ ಅಮಾವಾಸ್ಯೆ ಹಿನ್ನೆಲೆ ಗುಂಡ್ಲುಪೇಟೆ ಅಂಕಹಳ್ಳಿ ಗ್ರಾಮದಿಂದ ಅಣ್ಣೂರುಕೇರಿ ಮಹಾದೇಶ್ವರ ದೇವಸ್ಥಾನಕ್ಕೆ ಬರುತ್ತಿದ್ದ ವೇಳೆ ಟಾಟಾ ಏಸ್ ಪಲ್ಟಿಯಾಗಿದೆ. ಈ ವೇಳೆ ಟಾಟಾ ಎಸ್ನಲ್ಲಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.
ಹಲವರಿಗೆ ಕೈ ಕಾಲು ಮುರಿತ, ತಲೆಗೆ ಗಾಯ, ಪುಟ್ಟ ಮಕ್ಕಳಿಗೂ ಪೆಟ್ಟು ಬಿದ್ದಿದ್ದು, ಗಾಯಾಳುಗಳಿಗೆ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ 15ಕ್ಕೂ ಹೆಚ್ಚು ಮಂದಿಯನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.