ಬೆಂಗಳೂರು: ತಾಯಿಗಿಂತ ದೇವರಿಲ್ಲ ಎಂಬ ಮಾತಿದೆ. ತಾಯಿ ಪ್ರೀತಿಗಾಗಿ ಎಷ್ಟೋ ಜನ ಹಪಹಪಿಸುತ್ತಾರೆ. ಆದರೆ ಇಲ್ಲೊಬ್ಬ ಕ್ರೂರಿ ಮಗಳು ತನ್ನ ಹೆತ್ತ ತಾಯಿಯನ್ನು ಕೊಂದು ಸೂಟ್ ಕೇಸ್ ನಲ್ಲಿ ಪ್ಯಾಕ್ ಮಾಡಿ ನೇರವಾಗಿ ಪೊಲೀಸ್ ಠಾಣೆಗೆ ಬಂದಿದ್ದಾಳೆ.
ಸೇನಾಲಿ ಸೇನ್ ಎಂಬ 39 ವರ್ಷದ ಮಹಿಳೆ ತನ್ನ 70 ವರ್ಷದ ತಾಯಿ ಬೀವಾ ಪಾಲ್ ನ ಕೊಲೆ ಮಾಡಿದ್ದಾಳೆ. ತಾಯಿಯನ್ನು ಕೊಂದು ಸೂಟ್ಕೇಸ್ನಲ್ಲಿ ಶವ ಹೊತ್ತುಕೊಂಡು ಮಗಳು ಪೊಲೀಸ್ ಠಾಣೆಗೆ ಬಂದಿದ್ದಾಳೆ.
ಸೆನಾಲಿ ಸೇನ್ ಅಮ್ಮ ಮತ್ತು ಅತ್ತೆ ಒಂದೇ ಮನೆಯಲ್ಲಿದ್ದರು. ಇಬ್ಬರೂ ದಿನಾ ಗಲಾಟೆ ಮಾಡಿಕೊಳ್ಳುತ್ತಿದ್ದರು. ಬೀಗರ ಜಗಳಕ್ಕೆ ಬೇಸತ್ತು ಬೀವಾ ಪೌಲ್ ತನ್ನ ಮಗಳಿಗೆ ನಿದ್ದೆ ಮಾತ್ರೆ ಹಾಕಿ ಸಾಯಿಸುವುದಾಗಿ ಹೇಳಿದ್ದಾಳೆ. ಆದರೆ ಮಗಳೇ ಅಮ್ಮನಿಗೆ ನಿನ್ನೆ ಮುಂಜಾನೆ 20 ಮಾತ್ರೆಗಳನ್ನ ನುಂಗಿಸಿದ್ದಾಳೆ.
ನAತರ ಸುಮಾರು11 ಗಂಟೆಗೆ ತಾಯಿ ಹೊಟ್ಟೆ ನೋವು ಎಂದಾಗ ಆಸ್ಪತ್ರೆಗೆ ಸೇರಿಸಬೇಕಾದ ಮಗಳು ವೇಲ್ ನಿಂದ ಕುತ್ತಿಗೆ ಬಿಗಿದು ಹತ್ಯೆ ಮಾಡಿದ್ದಾಳೆ. ಅಷ್ಟೇ ಅಲ್ಲದೇ ಟ್ರಾ÷್ಯಲಿ ಸೂಟ್ ಕೇಸ್ ನಲ್ಲಿ ತಾಯಿಯನ್ನ ಪ್ಯಾಕ್ ಮಾಡಿ ತಂದೆ ಫೋಟೋ ಜೊತೆಗೆಗಿಟ್ಟು ನೇರವಾಗಿ ಮೈಕೋ ಲೇಔಟ್ ಠಾಣೆಗೆ ಬಂದಿದ್ದಾಳೆ.
ಬಿಳೇಕಹಳ್ಳಿಯ ಎನ್ ಎಸ್ ಆರ್ ಗ್ರೀನ್ ಅಪಾರ್ಟೆ್ಮಂಟ್ ನ ಪ್ಲಾಟ್ ನಿಂದ ಆಟೋದಲ್ಲಿ ಠಾಣೆಗೆ ಬಂದು ಶವದ ಸಮೇತ ಶರಣಾಗಿದ್ದಾಳೆ. ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸದ್ಯ ಈ ಸಂಬAಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸೆನಾಲಿ ಸೇನ್ಳನ್ನು ಬಂಧಿಸಿದ್ದಾರೆ.
ತಾಯಿ ಕೊಂದು ಸೂಟ್ ಕೇಸ್ ನಲ್ಲಿ ಪೊಲೀಸ್ ಠಾಣೆಗೆ ಶವ ತಂದ ಮಗಳು
