ಬೆಂಗಳೂರು: ಭರ್ಜರಿ ಗೆಲುವಿನ ನಂತರ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಅಗ್ನಿ ಪರೀಕ್ಷೆ ಎದುರಿಸುತ್ತಿದ್ದು, ಮುಖ್ಯಮಂತ್ರಿ ಸ್ಥಾನದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಹಿರಿಯ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಇಬ್ಬರೂ ಕಣ್ಣಿಟ್ಟಿದ್ದಾರೆ. ಸಿದ್ದರಾಮಯ್ಯ ಈಗಾಗಲೇ ದೆಹಲಿ ತಲುಪಿದ್ದಾರೆ. ನಾನು ಮಂಗಳವಾರ ಬೆಳಿಗ್ಗೆ ದೆಹಲಿಗೆ ಹೋಗುತ್ತೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಸಂಬAಧಿಸಿದAತೆ ಚರ್ಚಿಸಲು ಪಕ್ಷದ ವರಿಷ್ಠರ ಆಹ್ವಾನದ ಮೇರೆಗೆ ಸೋಮವಾರ ದೆಹಲಿಗೆ ತೆರಳಬೇಕಿದ್ದ ಶಿವಕುಮಾರ್, ತಮ್ಮ ಪ್ರವಾಸವನ್ನು ಸಂಜೆ ದಿಢೀರ್ ರದ್ದು ಮಾಡಿದ್ದರು.
ಸದಾಶಿವನಗರದ ತಮ್ಮ ನಿವಾಸದಲ್ಲಿ ಸೋಮವಾರ ರಾತ್ರಿ ಸುದ್ದಿಗಾರರ ಜೊತೆ ಮಾತನಾಡಿದ ಶಿವಕುಮಾರ್, ಆರೋಗ್ಯ ಸರಿಯಿಲ್ಲದ ಕಾರಣ ದೆಹಲಿಗೆ ಹೋಗಲು ಸಾಧ್ಯವಾಗಿಲ್ಲ. ವೈದ್ಯರು ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ ಎಂದರು. ಅಲ್ಲದೆ, ಸೋನಿಯಾ ಗಾಂಧಿ ಅವರು ಶಿಮ್ಲಾದಿಂದ ಮಂಗಳವಾರ ದೆಹಲಿಗೆ ವಾಪಸಾಗುತ್ತಾರೆ. ಸೋನಿಯಾಗಾಂಧಿ ಅವರು ಬರಲಿ ಎಂದು ನಾನು ಕಾಯುತ್ತಿದ್ದೆ. ಅವರನ್ನು ಭೇಟಿ ಮಾಡುವುದು ನನ್ನ ಕರ್ತವ್ಯ ಎಂದು ಹೇಳಿದರು.
ಯಾರಿಗೆ ಶಾಸಕರ ಬೆಂಬಲ ಇದೆ ಎಂಬುವುದು ಮುಖ್ಯವಲ್ಲ. ನನ್ನ ಅಧ್ಯಕ್ಷತೆಯಲ್ಲಿ 135 ಶಾಸಕರು ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಆಯ್ಕೆ ವಿಚಾರವನ್ನು ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬಿಟ್ಟಿದ್ದೇವೆ. ನನ್ನ ಜೊತೆ ಯಾವ ಶಾಸಕರೂ ಇಲ್ಲ. ನನಗೆ ಯಾರ ಬೆಂಬಲವೂ ಬೇಡ. ಯಾರು, ಯಾರನ್ನು ಬೇಕಾದರೂ ಕರೆದುಕೊಂಡು ಹೋಗಬಹುದು ಎಂದೂ ಹೇಳಿದರು.
ನಾನು ಬ್ಲಾ÷್ಯಕ್ಮೇಲ್ ಮಾಡುವುದಿಲ್ಲ ಅಥವಾ ಬಂಡಾಯ ಏಳುವುದಿಲ್ಲ, ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವಿನ ಹಿಂದೆ ಯಾರಿದ್ದಾರೆ ಎಂಬುದನ್ನು ಪಕ್ಷದ ನಾಯಕತ್ವಅರಿತುಕೊಳ್ಳಬೇಕು. ನೀವು ಕರ್ನಾಟಕವನ್ನು ಉದ್ಧಾರ ಮಾಡುತ್ತೀರಿ ಎಂಬ ವಿಶ್ವಾಸವಿದೆ” ಎಂದು ಸೋನಿಯಾ ಗಾಂಧಿ ಹೇಳಿದ್ದರು. ನಾನು ಇಲ್ಲಿ ಕುಳಿತು ನನ್ನ ನಿಯಮಿತ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದೇನೆ. ಗೆಲುವಿನ ಹಿಂದೆ ಯಾರಿದ್ದಾರೆ ಎಂಬುದನ್ನು ಒಪ್ಪಿಕೊಳ್ಳುವ ಸೌಜನ್ಯ, ಕೃತಜ್ಞತೆ ಇರಬೇಕು ಎಂದಿದ್ದಾರೆ.