ಬೆಂಗಳೂರು: ಸಂಘಪರಿವಾರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆಂದು ಆರೋಪಿಸಿ ನಟ ಹಾಗೂ ಹೋರಾಟಗಾರ ಚೇತನ್ ಅಹಿಂಸಾ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಸಂಘಪರಿವಾರದ ವಿರುದ್ಧ ಚೇತನ್ ಇತ್ತೀಚೆಗೆ ಪೋಸ್ಟ್ ವೊಂದನ್ನು ಹಾಕಿದ್ದರು. ಶಿವಕುಮಾರ್ ಎಂಬಾತ ದೂರು ನೀಡಿದ್ದರು. ಈ ಸಂಬಂಧ ಎಫ್ ಐಆರ್ ದಾಖಲಾಗಿತ್ತು. ಹಲವು ಬಾರಿ ವಿಚಾರಣೆಗೆ ನೊಟೀಸ್ ನೀಡಿದ್ದರೂ ಗೈರು ಹಾಜರಾಗಿದ್ದರಿಂದ ಪೊಲೀಸರು ಇಂದು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.