ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ದರ್ಶನ್ ಮತ್ತು ಗ್ಯಾಂಗ್ಗೆ ಈಗಾಗಲೇ ವಿಧಿಸಿದ್ದ 14 ದಿನಗಳ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಪವಿತ್ರಾ ಗೌಡರನ್ನು ಮಾತ್ರ ಪ್ರತ್ಯೇಕವಾದ ಕೊಠಡಿಯಲ್ಲಿ ಹಾಜರುಪಡಿಸಲಾಗಿತ್ತು. ಆರೋಪಿಗಳಿಗೆ ಆ.1 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ.
ಜೂ.11 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬAಧ ದರ್ಶನ್ ಬಂಧನ ಮಾಡಲಾಗಿತ್ತು. ಇದುವರೆಗೂ ದರ್ಶನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಕೆ ಮಾಡಿಲ್ಲ. ಚಾಜ್ಶೀðಟ್ ನ್ಯಾಯಾಲಯಕ್ಕೆ ಸಲ್ಲಿಕೆ ಆಗಲಿ ಎಂದು ವಕೀಲರು ಕಾಯುತ್ತಿರುವ ಸಾಧ್ಯತೆ ಇದೆ. ಕೊಲೆ ಪ್ರಕರಣ ಸಂಬAಧ ಚಾಜ್ಶೀðಟ್ ಸಲ್ಲಿಕೆ ಮಾಡಲು ಪೊಲೀಸರಿಗೆ 90 ದಿನಗಳ ಕಾಲಾವಕಾಶ ಇದೆ. ಚಾಜ್ಶೀðಟ್ ಸಲ್ಲಿಕೆ ಆಗುವವರೆಗೂ ದರ್ಶನ್ ಮತ್ತು ಗ್ಯಾಂಗ್ಗೆ ನ್ಯಾಯಾಂಗ ಬಂಧನವೇ ಗಟ್ಟಿಯಾಗಿದೆ.
ಒಂದು ವೇಳೆ ದರ್ಶನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಲ್ಲಿ ಚಾಜ್ಶೀðಟ್ಗೂ ಮುನ್ನ ಕೊಲೆ ಕೇಸ್ನಲ್ಲಿ ಜಾಮೀನು ಸಿಗುವುದು ಅನುಮಾನ. ಹೀಗಾಗಿ ಚಾಜ್ಶೀðಟ್ ಸಲ್ಲಿಕೆ ವೇಳೆಗೆ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಕೆ ಮಾಡಲು ದರ್ಶನ್ ಪರ ವಕೀಲರು ನಿರ್ಧರಿಸಿದ್ದಾರೆ.
ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳು ಜೈಲಿನಲ್ಲಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ 13, ತುಮಕೂರು ಜೈಲಿನಲ್ಲಿ 4 ಆರೋಪಿಗಳು ಇದ್ದಾರೆ.
ನಟ ದರ್ಶನ್ಗೆ ಆ.1ರವರೆಗೆ ಜೈಲೇ ಗತಿ
