ಆರ್ ಸಿಎಚ್ ವರದಿ
ಮೈಸೂರು: ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದಿಂದ ವಿವಿಧ ಭೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಆಕಾಶವಾಣಿ ಸಮೀಪದ ವಿಭಾಗೀಯ ಕಚೇರಿ ಎದುರು ಪ್ರತಿಭಟಿಸಿದರು.
8 ಗಂಟೆಗಳ ಕೆಲಸ ನೀಡುವುದು ಮತ್ತು ಪಿಂಚಣಿ ಸೇರಿದಂತೆ ಎಲ್ಲಾ ಸವಲತ್ತುಗಳನ್ನು ಒದಗಿಸಬೇಕು. ಸೇವಾ ಹಿರಿತನದ ಆಧಾರದ ಮೇಲೆ 12-24-36 ಸೇವೆ ಸಲ್ಲಿಸಿದ ಜಿಡಿಎಸ್ ನೌಕರರಿಗೆ ವಿಶೇಷ ಇನ್ ಕ್ರಿಮೆಂಟ್ ನೀಡುವುದು. ಅವೈಜ್ಞಾನಿಕ ಗುರಿ ನೀಡಿ ಮೇಳಗಳನ್ನು ನಡೆಸುವುದು. ಗ್ರೂಪ್ ಇನ್ಸುರೆನ್ಸ್ ಕವರೇಜ್ 5ಲಕ್ಷ ರೂ.ವರೆಗೆ ಹೆಚ್ಚಿಸುವುದು. ಅವೈಜ್ಞಾನಿಕ ಗುರಿ ಸಾಧಿಸದಿರುವ ಜಿಡಿಎಸ್ ನೌಕರರಿಗೆ ನೀಡುತ್ತಿರುವ ಕಿರುಕುಳವನ್ನು ನಿಲ್ಲಿಸುವುದು. ಜಿಡಿಎಸ್ ಗ್ರಾಚ್ಯುಯಿಟಿ ಹಣವನ್ನು 5ಲಕ್ಷ ರೂ.ವರೆಗೆ ಹೆಚ್ಚಿಸುವುದು. 180 ದಿನಗಳ ರಜೆ ಉಳಿಸಿಕೊಳ್ಳಲು ಅವಕಾಶ ಕಲ್ಪಿಸುವುದು.
ಜಿಡಿಎಸ್ ಸದಸ್ಯರು ಹಾಗೂ ಕುಟುಂಬದ ಸದಸ್ಯರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ವಿಭಾಗೀಯ ಅಧ್ಯಕ್ಷ ಎಸ್.ಆರ್. ಸೋಮಶೇಖರ್,
ಕಾರ್ಯದರ್ಶಿ ಟಿ.ರಾಣಿ ಇನ್ನಿತರರು ಉಪಸ್ಥಿತರಿದ್ದರು.
ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಂಚೆ ನೌಕರರ ಪ್ರತಿಭಟನೆ
