ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ನಾಳೆ ಮಂಡ್ಯದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.
ಬೆಂಗಳೂರು- ಮೈಸೂರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿತ್ತು. ಆದರೆ, ಈ ಕುರಿತು ಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ, ನಾಳೆ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡುವುದಿಲ್ಲ ಮತ್ತು ಮಾಡುವುದು ತಪ್ಪಾಗುತ್ತದೆ. ಮಂಡ್ಯದ ಸಂಜಯ್ ಸರ್ಕಲ್ ನಲ್ಲಿ ಪ್ರತಿಭಟನೆ ಇದೆ ಎಂದು ತಿಳಿಸಿದ್ದಾರೆ.
ಬೆಂಗಳೂರು-ಮೈಸೂರು ಹೆದ್ದಾರಿ ತಡೆಗೆ ಪೊಲೀಸರಿಂದ ಅನುಮತಿ ನಿರಾಕರಣೆ ಹಿನ್ನೆಲೆ ಇಂಡುವಾಳುಯಿಂದ ಸಂಜಯ ವೃತ್ತಕ್ಕೆ ಪ್ರತಿಭಟನೆ ಸ್ಥಳಾಂತರವಾಗಿದೆ. ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.