ಮೈಸೂರು:- ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿ ಕಾಂತ ರೆಡ್ಡಿ .ಜಿ ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.ನಿರ್ಗಮಿತ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು. ಡಿಢೀರ್ ವರ್ಗಾವಣೆ :ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರನ್ನು ಡಿಢೀರ್ ವರ್ಗಾವಣೆ ಮಾಡಲಾಗಿದೆ.ಕೆ.ವಿ.ರಾಜೇಂದ್ರ ಅವರ ಸ್ಥಾನಕ್ಕೆ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ ಅವರನ್ನ ನೇಮಕ ಮಾಡಲಾಗಿದೆ.ಡಾ.ಕೆ.ವಿ ರಾಜೇಂದ್ರರವರಿಗೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾಗಿ ಅಧಿಕಾರ ನೀಡಲಾಗಿದೆ. ಲಕ್ಷ್ಮೀ ಕಾಂತ ರೆಡ್ಡಿ ಅವರು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಈ ಹಿಂದೆ ಕೆಲಸ ನಿರ್ವಹಿಸಿದ್ದರು.ಪ್ರಸ್ತುತ ಕರ್ನಾಟಕ ಅರ್ಬನ್ ಇನ್ಫ್ರಾಸ್ಟ್ರಕ್ಚರ್ ಅಂಡ್ ಫೈನಾನ್ಸ್ ಕಾಪೆರ್Çರೇಷನ್ ನಲ್ಲಿ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಲಕ್ಷ್ಮೀಕಾಂತ ರೆಡ್ಡಿ ಅವರಿಗೆ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.ಇದೀಗ ರಾಜೇಂದ್ರ ಅವರ ವರ್ಗಾವಣೆ ಹಿನ್ನಲೆಯಲ್ಲಿ ಹಲವು ಅನುಮಾನ ಮೂಡಿದೆ.ಮೈಸೂರಿನ ಮುಡಾದಲ್ಲಿ ನಡೆದಿರುವ ಅಕ್ರಮ ಹಿನ್ನೆಲೆಯಲ್ಲಿ ರಾಜೇಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿಗೆ 50-50 ಅನುಪಾತದಲ್ಲಿ ಸೈಟು ಹಂಚಿಕೆ ಮಾಡಲಾಗಿದೆ ಎಂಬ ಹಗರಣದ ಹಿನ್ನೆಲೆಯಲ್ಲಿ ರಾಜೇಂದ್ರ ಅವರನ್ನು ಬೇರೆಡೆಗೆ ವರ್ಗಾಯಿಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಹಗರಣ ಕುರಿತು ಜಿಲ್ಲಾಧಿಕಾರಿಗಳ ಇದ್ದಾಗ ರಾಜೇಂದ್ರ ಅವರು 15 ಬಾರಿ 150 ರಿಗೆ ಪತ್ರ ಬರೆದಿದ್ದರು ಎನ್ನಲಾಗಿದೆ ಆದರೆ 15 ರಿಂದ ಈ ಬಗ್ಗೆ ಯಾವುದೇ ಉತ್ತರ ಬಾರದ ಹಿನ್ನೆಲೆಯಲ್ಲಿ ಈ ಕುರಿತು ಜಿಲ್ಲಾಧಿಕಾರಿಯಾಗಿದ್ದ ರಾಜೇಂದ್ರ ಅವರು ರಾಜ್ಯ ಸರ್ಕಾರಕ್ಕೆ ಹಾಗೂ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದ ಈ ಪ್ರಕರಣದಲ್ಲಿ ಹಲವು ಅನುಮಾನಗಳು ಉಂಟಾಗಿತ್ತು ನೀತಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ಬರೆದಿದ್ದರು ಎಂದು ಹೇಳಲಾಗಿದೆ.ಈ ವಿಷಯ ಮಾಧ್ಯಮದಲ್ಲಿ ವರದಿಯಾದ ಹಿನ್ನೆಲೆಯಲ್ಲಿ ರಾಜೇಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.