ಚೆನ್ನೈ: ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ 8 ಮಂದಿ ಸಾವನ್ನಪ್ಪಿ, 16ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಕಾಂಚೀಪುರA ಜಿಲ್ಲೆಯಲ್ಲಿ ನಡೆದಿದೆ.
ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ..
ಘಟನಾ ಸ್ಥಳಕ್ಕೆ ಆಗಮಿಸಿದ ಕಾಂಚೀಪುರA ಜಿಲ್ಲಾಧಿಕಾರಿ ಎಂ.ಆರತಿ ಪರಿಸ್ಥಿತಿ ಪರಿಶೀಲನೆ ನಡೆಸಿದ್ದಾರೆ.
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 8 ಮಂದಿ ದುರ್ಮರಣ
![](https://stateroute.in/wp-content/uploads/no-image.jpg)