ಪುಣೆ: ಟ್ರಕ್ವೊಂದು ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟು, 18 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಭಾನುವಾರ ನಡೆದಿದೆ.
ತಡರಾತ್ರಿ 2 ಗಂಟೆ ಸುಮಾರಿಗೆ ಮುಂಬೈ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ. ಸತಾರಾದಿಂದ ದೊಂಬಿವ್ಲಿಗೆ ತೆರಳುತ್ತಿದ್ದ ಖಾಸಗಿ ಬಸ್ ಸ್ವಾಮಿನಾರಾಯಣನ್ ದೇಗುಲದ ಬಳಿ ತಲುಪುತ್ತಿದ್ದಂತೆ ಹಿಂಬದಿಯಿಂದ ಟ್ರಕ್ ಡಿಕ್ಕಿ ಹೊಡೆದಿದೆ.
ಬಸ್ನಲ್ಲಿದ್ದ ಮೂವರು ಪ್ರಯಾಣಿಕರು, ಟ್ರಕ್ ಚಾಲಕ ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ಕಳೆದುಕೊಂಡ ಟ್ರಕ್, ಬಸ್ಗೆ ಡಿಕ್ಕಿ ಹೊಡೆದಿದೆ. ಬಳಿಕ, ವೈದ್ಯಕೀಯ ತಂಡ ಸ್ಥಳಕ್ಕೆ ತೆರಳಿ ಸಂತ್ರಸ್ತರಿಗೆ ಪ್ರಥಮಿಕ ಚಿಕಿತ್ಸೆ ನೀಡಿದ್ದಾರೆ. ಬಳಿಕ, ಗಾಯಾಳುಗಳನ್ನು ಪುಣೆಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಅಪಘಾತಕ್ಕೆ ಚಾಲಕನ ವೈಫಲ್ಯವೇ ಕಾರಣ ಎಂದು ಜಿಲ್ಲಾ ಪಂಚಾಯತಿಯ ಸಿಒ ಆಯುಷ್ ಪ್ರಸಾದ್ ಹೇಳಿದ್ದಾರೆ. ಪ್ರಯಾಣಿಕರು ರಾತ್ರಿ ಪ್ರಯಾಣದ ವೇಳೆ ಎಚ್ಚರವಹಿಸಬೇಕೆಂದು ಅವರು ತಿಳಿಸಿದ್ದಾರೆ.
ಬಸ್ಗೆ ಟ್ರಕ್ ಡಿಕ್ಕಿ: ನಾಲ್ವರ ಸಾವು
