ಮಂಡ್ಯ,: ಸರಿಯಾದ ಮಳೆ ಇಲ್ಲದೇ ಬರಿದಾಗಿದ್ದ ಕಾವೇರಿ ಜಲಾಶಯ ಇದೀಗ ಭರ್ತಿಯಾಗಿದ್ದು, ರೈತರು ಸಂತಸಗೊಂಡಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು ಸೇರಿ ಅವರು ಇಂದು ಕಾವೇರಿಗೆ ಬಾಗಿನ ಅರ್ಪಿಸಿದರು. ಆದ್ರೆ ಬಾಗಿನ ಕಾರ್ಯಕ್ರಮದ ದಿನ ಬಾಡೂಟ ಆಯೋಜನೆ ಮಾಡಲಾಗಿದೆ.
ಹೌದು…ಕೆಆರ್ಎಸ್ನ ಖಾಸಗಿ ಹೋಟೆಲ್ ನಲ್ಲಿ ಬಾಡೂಟ ಆಯೋಜನೆ ಮಾಡಲಾಗಿದ್ದು, ಸಿಎಂ, ಡಿಸಿಎಂ ಬಾಗಿನ ಅರ್ಪಣೆ ಮಾಡಿ ಹೊರಟು ಹೋದ ಬಳಿಕ ಇಲಾಖೆಯ ಅಧಿಕಾರಿಗಳು ಭರ್ಜರಿ ಬಾಡೂಟ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸಂಪ್ರದಾಯಕ್ಕೆ ಎಳ್ಳು-ನೀರು ಬಿಟ್ಟಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರು, ಶಾಸಕರು ಬಾಗಿನ ಅರ್ಪಣೆ ಮಾಡಿ ತೆರಳಿದ್ದು, ಇತ್ತ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳ ಬೆಂಬಲಿಗರು KRSನ ಖಾಸಗಿ ಹೋಟೆಲ್ ನಲ್ಲಿ ಭರ್ಜರಿ ಬಾಡೂಟ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ಸಂಪ್ರದಾಯ ಮುರಿದಿದ್ದಾರೆ.
ಈ ಹಿಂದೆ ಎಂದೂ ಬಾಗಿನ ಸಲ್ಲಿಸಿದ ದಿವಸ ಬಾಡೂಟ ಆಯೋಜಿಸಿದ್ದ ಉದಾಹರಣೆಗಳೇ ಇಲ್ಲ. ಇದೇ ಮೊದಲ ಬಾರಿಗೆ ಬಾಗಿನ ಸಲ್ಲಿಸಿದ ದಿನ ಬಾಡೂಟ ಆಯೋಜನೆ ಮಾಡಲಾಗಿದೆ. ಈ ಮೂಲಕ ಕಾವೇರಿ ನೀರಾವರಿ ನಿಗಮ ಅಧಿಕಾರಿಗಳು ಸಂಪ್ರದಾಯಕ್ಕೆ ಎಳ್ಳು ನೀರು ಬಿಟ್ಟಿದ್ದು, ಇದಕ್ಕೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ.