ತುಮಕೂರು: ಮುಂಜಾನೆ ಜಿಲ್ಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆಯಾಗಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಹಲವು ಕಾರ್ಯಕರ್ತರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಬಿಜೆಪಿ ಕಾರ್ಯಕರ್ತರಾದ ಮುಬಾರಕ್ ಪಾಷಾ ಮತ್ತು ನಜೀರ್ ಅವರ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ಕಡೆಯವರು ತಿಳಿಸಿದ್ದಾರೆ.
ಈ ಘಟನೆಯ ಬೆನ್ನಲ್ಲೇ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರನ್ನ ಒಡೆದ ಬಾಟಲಿಗಳು ಮತ್ತು ಚಾಕುವಿನಿಂದ ಇರಿದಿದ್ದಾರೆ ಎಂದು ಸ್ಥಳೀಯ ಅಂಗಡಿಕಾರರು ಆರೋಪಿಸಿದ್ದಾರೆ. ಈ ಕುರಿತು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಕಳೆದ ತಿಂಗಳು ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದ ಮೈದಾನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿದ್ದು, ನಂತರ ಪೊಲೀಸರು ಅವರ ವಿರುದ್ದ ಎಫ್ಐಆರ್ ದಾಖಲಿಸಿದ್ದರು. ಮಾರ್ಚ್ 19 ರಂದು ನಡೆಯಲಿರುವ ಮಹಿಳಾ ಸಮಾವೇಶಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬ್ಯಾನರ್ ಮತ್ತು ಭಿತ್ತಿಪತ್ರಗಳನ್ನು ಹಾಕುವುದನ್ನು ಬಿಜೆಪಿ ಬೆಂಬಲಿಗರು ವಿರೋಧಿಸಿ, ಮಾತಿಗೆ ಮಾತು ಬೆಳೆದು ಜಗಳಕ್ಕೆ ತಿರುಗಿದ್ದು, ಎರಡೂ ಪಕ್ಷಗಳ ಬೆಂಬಲಿಗರು ಕಲ್ಲುಗಳು ಮತ್ತು ದೊಣ್ಣೆಗಳಿಂದ ಪರಸ್ಪರ ದಾಳಿ ಮಾಡಿಕೊಂಡಿದ್ದರು.
ಬಳಿಕ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗುಂಪನ್ನು ಹತೋಟಿಗೆ ತರಲು ಲಾಠಿ ಪ್ರಹಾರ ನಡೆಸಿದ್ದರು. ಈ ವೇಳೆ ಎರಡೂ ಗುಂಪುಗಳು ಕಲ್ಲು ತೂರಾಟ ನಡೆಸಿದ್ದು, ನಮ್ಮ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ. ಘಟನೆಗೆ ಸಂಬAಧಿಸಿದAತೆ ಮೂರು ಎಫ್ಐಆರ್ಗಳನ್ನು ದಾಖಲಿಸಲಾಗಿದೆ ಎಂದು ಡಿಸಿಪಿ ಲಕ್ಷ÷್ಮಣ್ ಬಿ ನಿಂಬರಗಿ ತಿಳಿಸಿದ್ದರು.