ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದ ರಾಮಪ್ಪ ಹೋಸಲ್ಕಾರ ಎಂಬ 31 ವರ್ಷದ ವ್ಯಕ್ತಿ ಹೃದಯಾಘಾತವಾಗಿ ಸಾವನ್ನಪ್ಪಿದ್ದಾನೆ. ಸೆಪ್ಟೆಂಬರ್ 5ರಂದು ಯುವಕನ ಮದುದೆ ನಿಗದಿಯಾಗಿತ್ತು. ಮಂಗಳವಾರ ರಾತ್ರಿ ಎಂಟು ಗಂಟೆ ಆಸುಪಾಸಿನಲ್ಲಿ ಮನೆ ಮುಂದೆ ಮದುವೆ ಪೂರ್ವ ಸಿದ್ಧತೆ ಮಾಡುವಾಗ ದೂರವಾಣಿಯಲ್ಲಿ ಮಾತನಾಡುವ ವೇಳೆ ತೀವ್ರ ಹೃದಯಾಘಾತದಿಂದ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ.
ತುರ್ತಾಗಿ ಅಥಣಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ರವಾನಿಸಿದರು ಅದರೆ ಯುವಕ ಉಳಿಯಲಿಲ್ಲ. ಮನೆಗೆ ಆಸರೆಯಾಗಿದ್ದ ಒಬ್ಬನೇ ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲುಮುಟ್ಟಿದೆ. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು ಪ್ರಕರಣ ದಾಖಲಾಗಿದೆ.
ಮದುವೆ ಆಗುವವಳ ಜೊತೆ ಫೋನಿನಲ್ಲಿ ಮಾತನಾಡುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ ಯುವಕ…!
