ಮೈಸೂರು: ರಿಯಲ್ ಎಸ್ಟೇಟ್ ಉದ್ಯಮಿಯೊಂದಿಗೆ ಷಾಮೀಲಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ನಿವೇಶನಗಳನ್ನು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿ ಪ್ರಾಧಿಕಾರಕ್ಕೆ/ಸರ್ಕಾರಕ್ಕೆ ಅಂದಾಜು 300ಕೋಟಿ ರೂ. ಹೆಚ್ಚು ಆರ್ಥಿಕ ನಷ್ಟವುಂಟು ಮಾಡಿ, ಅಕ್ರಮ ಎಸಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಕೀಲ ರವಿ ಒತ್ತಾಯಿಸಿದರು.
ಈ ಕುರಿತು ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿ.ಟಿ.ದಿನೇಶ್ಕುಮಾರ್, ವಿಶೇಷ ತಹಶೀಲ್ದಾರ್ ಶಿವಕುಮಾರ್, ಹೆಚ್ಚುವರಿ ಜಿಲ್ಲಾ
ನೊಂದಣಾಧಿಕಾರಿ ಕಾವ್ಯ, ರಿಯಲ್ ಎಸ್ಟೇಟ್ ಉದ್ಯಮಿ ಎನ್.ಮಂಜುನಾಥ್ ಹಾಗೂ ಸಂಬಂಧಪಟ್ಟ ಪ್ರಾಧಿಕಾರದ ಸದಸ್ಯ, ಅಧಿಕಾರಿ, ನೌಕರರುಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಲೋಕಾಯುಕ್ತ, ಮುಖ್ಯಮಂತ್ರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದೇನೆಂದರು. ಹೀಗಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮ ನಿವೇಶನಗಳನ್ನು ಕೊಳ್ಳದಿರುವಂತೆ ಈ ವೇಳೆ ಮನವಿ ಮಾಡಿದರು.