ವರಲಕ್ಷ್ಮೀ ಹಬ್ಬದ ಸಂಭ್ರಮದಲ್ಲಿ ನಟ ದರ್ಶನ್ ಮಾಧ್ಯಮಗಳಿಗೆ ಬಹಿರಂಗ ಪತ್ರ ಬರೆದಿದ್ದಾರೆ. ದರ್ಶನ್ ಮಾಧ್ಯಮಗಳ ಬಗ್ಗೆ ಅವಾಚ್ಯ ಶಬ್ದಗಳಿಂದ ಜರಿದಿದ್ದಾರೆ ಎನ್ನಲಾಗಿದ್ದ ಆಡಿಯೋ ಕೆಲ ದಿನಗಳ ಹಿಂದೆ ವೈರಲ್ ಆಗಿತ್ತು. ಆ ಆಡಿಯೋ ವೈರಲ್ ಆಗುತ್ತಿದ್ದಂತೆ ವಿದ್ಯುನ್ಮಾನ ಮಾಧ್ಯಮಗಳು ದರ್ಶನ್ ಅವರನ್ನು ಅಘೋಷಿತ ಬ್ಯಾನ್ ಮಾಡಿದ್ದವು. ದರ್ಶನ್ ಕುರಿತು ಸುದ್ದಿ ಪ್ರಸಾರ ಮಾಡುತ್ತಿರಲಿಲ್ಲ.
“ಸಮಸ್ತ ಕರ್ನಾಟಕ ಜನತೆಗೆ ನನ್ನ ಸೆಲೆಬ್ರಿಟಿಗಳಿಗೆ ಹಾಗೂ ಹಿರಿಯ ಪತ್ರಕರ್ತರಿಗೆ, ಮಾಧ್ಯಮ ಮಿತ್ರರಿಗೆ ವರಮಹಾಲಕ್ಷಿ÷್ಮ ಹಬ್ಬದ ಹಾರ್ದಿಕ ಶುಭಾಶಯಗಳು. ಕಳೆದ ಸುಮಾರು ಎರಡು ವರ್ಷಗಳಿಂದ ನನ್ನ ಹಾಗೂ ಕನ್ನಡ ಮಾಧ್ಯಮ ಮಿತ್ರರ ನಡುವೆ ಒಂದು ಕಂದಕ ಉಂಟಾಗಿತ್ತು. ಈ ವರಮಹಾಲಕ್ಷಿ÷್ಮ ಹಬ್ಬದ ಮುನ್ನಾದಿನ ಮಿತ್ರ ರಾಕ್ ಲೈನ್ ವೆಂಕಟಶ್ ನೇತೃತ್ವದಲ್ಲಿ ನನ್ನ ಹಾಗೂ ಕನ್ನಡದ ಪ್ರಮುಖ ಮಾಧ್ಯಮಗಳ ಸಂಪಾದಕರ ನಡುವೆ ಮಾತುಕತೆ ನಡೆದು ಇಡೀ ಪ್ರಕರಣ ಸುಖಾಂತ್ಯಗೊAಡಿದೆ.”
![](https://stateroute.interwebplus.com/wp-content/uploads/2023/08/Darshan-Tweet-300x213.jpg)
“ಕೆಲ ವರ್ಷಗಳ ಹಿಂದಿನ ನನ್ನ ಆಡಿಯೋ ಒಂದು ದುರುದೇಶಪೂರ್ವಕವಾಗಿ ವೈರಲ್ ಆಗಿ ಇಡೀ ವಿವಾದಕ್ಕೆ ಕಾರಣವಾಗಿತ್ತು. ಅದು ಯಾವುದೋ ವಿಷಮ ಘಳಿಗೆಯಲ್ಲಿ ಒಬ್ಬ ವ್ಯಕ್ತಿಯ ಮಾತಿಗೆ ಪ್ರತಿಕ್ರಿಯೆಯಾಗಿತ್ತು. ಅದು ಮಾಧ್ಯಮದ ಇತರ ವ್ಯಕ್ತಿಗಳನ್ನು ಕುರಿತು ಆಡಿದ ಮಾತಾಗಿರಲಿಲ್ಲ. ಆ ವ್ಯಕ್ತಿ ಯಾವ ದುರುದ್ದೇಶದಿಂದ ಮಾಡಿದರು ಗೊತ್ತಿಲ್ಲ, ಆದರೂ ಆ ವ್ಯಕ್ತಿಗೆ ಒಳ್ಳೆಯದಾಗಲಿ ಮುಂದೆ ಆ ವ್ಯಕ್ತಿ ಈ ರೀತಿಯ ದುರುದ್ದೇಶವನ್ನು ಮರುಕಳಿಸದಿರಲಿ”
“ಆದರೂ ಅಂತಹ ಮಾತಿನಿಂದ ನೋವುಂಟಾಗಿದ್ದರೆ ಮಾಧ್ಯಮದ ಹಿರಿಯರಿಗೆ ಕ್ಷಮೆ ಕೋರುವುದರಲ್ಲಿ ತಪ್ಪಿಲ್ಲ. ಈ ಅಯಾಟಿತ ಘಟನೆಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ರಂಗದ ಕ್ಷಮೆ ಇರಲಿ. ಒಂದು ಉತ್ತಮವಾದ ಸಮಾಜಕ್ಕೆ ಒಳ್ಳೆಯ ಮಾಧ್ಯಮಗಳ ಅಗತ್ಯವಿದೆ. ನನಗೂ ಮಾಧ್ಯಮಗಳ ಬಗ್ಗೆ ಗೌರವವಿದೆ. ಚಿತ್ರರಂಗದ ನನ್ನ ಬೆಳವಣಿಗೆಯಲ್ಲಿ ಮಾಧ್ಯಮಗಳು ಪ್ರೀತಿಯಿಂದ ನೀಡಿದ ಪ್ರಚಾರದ ಪಾಲೂ ಸಾಕಷ್ಟಿದೆ. ಈ ಹಿಂದೆ ಆಗಿರುವ ಕಹಿ ಘಟನೆಯನ್ನು ಮರೆತು ನಾವೆಲ್ಲ ಮುಂದೆ ಸಾಗೋಣ”