ಕಿರಿಕ್ ಬ್ಯೂಟಿ ಸಂಯುಕ್ತಾ ಹೆಗ್ಡೆ ಜೊತೆ ‘ಬಿಗ್ ಬಾಸ್’ ಖ್ಯಾತಿಯ ಕಿಶನ್ ಬಿಳಗಲಿ ಡ್ಯಾನ್ಸ್ ಮಾಡಿರೋದು ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಆಗಿದೆ. ರೊಮ್ಯಾಂಟಿಕ್ ಹಾಡಿಗೆ ಇಬ್ಬರು ಕುಣಿದು ಕುಪ್ಪಳಿಸಿದ್ದಾರೆ.
ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುವ ಕಿರಿಕ್ ಬೆಡಗಿ ಸಂಯುಕ್ತಾ ಹೆಗ್ಡೆ ಈಗ ಕಿಶನ್ ಬಿಳಗಲಿ ಜೊತೆ ಮಸ್ತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು ಸಂಯುಕ್ತಾಗೆ ಮೈತುಂಬಾ ಬಟ್ಟೆ ಹಾಕಮ್ಮ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.
ಜಂಗ್ಲಿ ಸಿನಿಮಾದ ನೀನೆಂದರೆ ನನ್ನೊಳಗೆ ಎಂಬ ಹಾಡಿಗೆ ಕಿಶನ್ ಜೊತೆ ನಟಿ ಸೊಂಟ ಬಳುಕಿಸಿದ್ದಾರೆ. ಇಬ್ಬರು ಬಿಳಿ ಬಣ್ಣದ ಉಡುಗೆಯಲ್ಲಿ ಹೈಲೆಟ್ ಆಗಿದ್ದಾರೆ.
ರಿಯಾಲಿಟಿ ಶೋಗಳಲ್ಲಿನ ಡ್ಯಾನ್ಸ್ ಮೂಲಕ ಮೋಡಿ ಮಾಡಿರುವ ಕಿಶನ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ಡ್ಯಾನ್ಸ್, ಫೋಟೋಶೂಟ್, ದಿನಚರಿಯ ಬಗ್ಗೆ ಅಪ್ಡೇಟ್ ನೀಡುತ್ತಾ ಸಕ್ರಿಯರಾಗಿದ್ದಾರೆ. ಸಂಯುಕ್ತಾ ಜೊತೆಗಿನ ಕಿಶನ್ ಡ್ಯಾನ್ಸ್ ಮೆಚ್ಚುಗೆಯ ಜೊತೆ ನೆಗೆಟಿವ್ ಕಾಮೆಂಟ್ಸ್ ಕೂಡ ಹರಿದು ಬರುತ್ತಿವೆ.