ಮೈಸೂರು: ಮೈಸೂರಿನ ಶ್ರೀರಾಂಪುರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಜಿಷ್ಣ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ತಮಿಳುನಾಡಿನ ನೀಲಗಿರಿ ಜಿಲ್ಲೆಯ ಯುವತಿ ಜಿಷ್ಣ(20) ವರ್ಷದ ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ತಮಿಳುನಾಡಿನ ಮೂಲದ ವಿದ್ಯಾರ್ಥಿಯೊಬ್ಬಳು ಪರೀಕ್ಷೆಯಲ್ಲಿ ಆದ ಕಾರಣದಿಂದ ಕಾಲೇಜು ವಿದ್ಯಾರ್ಥಿನಿಲಯದ ಕೊಠಡಿಯೊಂದರಲ್ಲಿ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶ್ರೀರಾಂಪುರದ ಖಾಸಗಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವತಿಯು ಬಿಸಿಎ ವ್ಯಾಸಂಗ ಮಾಡುತ್ತಿದ್ದ ಯುವತಿ ಸೆಮಿಸ್ಟರ್ನಲ್ಲಿ ಫೇಲಾಗಿದ್ದರಿಂದ ಒತ್ತಡಕ್ಕೊಳಗಾಗಿ ಇಂದು ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಶಂಕಿಸಲಾಗಿದೆ.
ಮೈಸೂರು ದಕ್ಷಿಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ