ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮೈಸೂರಿನ ನರಸೀಪುರದಲ್ಲಿ ಯುಗಾದಿ ಹಬ್ಬದ ಸಡಗರ ಸಂಭ್ರಮ ಕಳೆಕಟ್ಟಿದೆ.
ಪವಿತ್ರ ನದಿಗಳಾದ ಕಾವೇರಿ, ಕಪಿಲಾ ಹಾಗೂ ಗುಪ್ತಗಾಮಿನಿ ಸ್ಪಟಿಕ ಸರೋವರ ಒಂದಾಗಿ ಸೇರುವ ತ್ರಿವೇಣಿ ಸಂಗಮಕ್ಕೆ ಭಕ್ತ ಸಾಗರ ಹರಿದು ಬರುತ್ತಿದೆ. ಸಾವಿರಾರು ಜನರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ.
ಮೈಸೂರು,ಮಂಡ್ಯ,ಚಾಮರಾಜನಗರ ಸೇರಿದಂತೆ ಇತರೆಡೆಯಿಂದ ಭಕ್ತರು ಆಗಮಿಸಿದ್ದಾರೆ. ಪುಣ್ಯ ಸ್ನಾನ ತರುವಾಯ ಅಲ್ಲೆ ಇರುವ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಜನರು ತಮ್ಮ ತಮ್ಮ ಗ್ರಾಮಗಳತ್ತ ತೆರಳುತ್ತಿದ್ದಾರೆ.
ತಮಟೆ,ನಗಾರಿ,ವಾದ್ಯಗೋಷ್ಠಿ ಮೂಲಕ ಉತ್ಸಮೂರ್ತಿಗಳ ಮೆರವಣಿಗೆಯನ್ನು ಈ ವೇಳೆ ಮಾಡಲಾಯಿತು. ಮುಂಜಾಗ್ರತಾ ಕ್ರಮವಾಗಿ ತ್ರಿವೇಣಿ ಸಂಗಮದ ಸುತ್ತ ಬಿಗಿ ಪೋಲೀಸ್ ಬಂದೋಬಸ್ತ್ ಮಾಡಲಾಗಿದೆ