ಬೆಂಗಳೂರು: ರಾಜ್ಯಾದ್ಯಂತ ಮಂಗಳವಾರ ಭಾರಿ ಮಳೆ ಸುರಿಯುತ್ತಿದ್ದು, ಇಂದು ಸಂಜೆ ಸುರಿದ ಭಾರಿ ಮಳೆಗೆ ಅಥಣಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಜ್ಯದಲ್ಲಿ ಮುಂಗಾರು ಮಳೆ ಆಗಮನದ ಮೊದಲೇ ಗುಡಗು, ಸಿಡಿಲಿನ ಅಬ್ಬರ ಹೆಚ್ಚಾಗಿದ್ದು, ಸಂಜೆ ಸುರಿದ ಭಾರಿ ಮಳೆಗೆ ಅಥಣಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಅಥಣಿ ತಾಲೂಕಿನಲ್ಲಿ ಪ್ರತ್ಯೇಕ ಗ್ರಾಮದಲ್ಲಿ ಸಿಡಿಲು ಬಡೆದು ಒಬ್ಬ ಯುವಕ, ಒರ್ವ ಮಹಿಳೆ ಮೃತ ಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿಯ ತಾಲೂಕಿನ ಕೋಡಿಹಳ್ಳಿ ಗ್ರಾಮದ ಕೆಸ್ಕರಿ ದಡ್ಡಿ ನಿವಾಸಿಯಾದ ಅಮೂಲ್ ಜಯಸಿಂಗ ಕಾನಡೆ (24 ವರ್ಷ) ಮತ್ತು ವಿಠ್ಠಬಾಯಿ ಮಹದೇವ ಕಾಮಕರ (50 ವರ್ಷ) ಎಂಬವರು ಸಿಡಿಲು ಬಡಿದು ಸಾವಪ್ಪಿದ್ದಾರೆ. ಇವರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಅಡಿಯುಡಿ ಗ್ರಾಮದ ನಿವಾಸಿಯಾಗಿದ್ದು, ಅಥಣಿ ತಾಲೂಕಿನ ದೇಸಾರಹಟ್ಟಿ ಗ್ರಾಮದ ಮಗಳ ಮನೆಗೆ ಬಂದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಅಕಾಲಿಕ ಮಳೆ ಕೇವಲ ಬೆಂಗಳೂರು, ಮೈಸೂರು ಮೊದಲಾದ ಕಡೆಗಳಲ್ಲಿ ಮಾತ್ರವಲ್ಲದೇ ಕಿತ್ತೂರು ಕರ್ನಾಟಕ ಭಾಗದಲ್ಲೂ ಆಗುತ್ತಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ಮತ್ತು ರಾಯಬಾಗ್ ತಾಲ್ಲೂಕುಗಳಲ್ಲಿ ಇಂದು ಮಧ್ಯಾಹ್ನ ಬಿರುಗಾಳಿ ಸಮೇತ ಜೋರು ಮಳೆಯಾಗಿದೆ. ಎರಡೂ ಕಡೆಗಳಲ್ಲಿ ಆಲಿಕಲ್ಲು ಸುರಿದ ಮಾಹಿತಿ ಲಭ್ಯವಾಗಿದೆ. ಕಾಗವಾಡ ತಾಲೂಕಿನ ಮೊಳೆ, ಉಗಾರಖುರ್ದ್ ಮತ್ತು ಕಾಗವಾಡದಲ್ಲಿ ಭಾರಿ ಮಳೆಯಾಗಿದೆ. ಹಾಗೆಯೇ, ರಾಯಭಾಗ ತಾಲೂಕಿನ ಕುಡಚಿ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲೂ ಮಳೆ ಧಾರಾಕಾರವಾಗಿ ಸುರಿದಿದೆ.
ರಾಮನಗರದಲ್ಲಿ ಸಿಡಿಲು ಬಡಿದು ವ್ಯಕ್ತಿ ಆಸ್ಪತ್ರೆಗೆ ದಾಖಲು: ಇನ್ನು ರಾಮನಗರದಲ್ಲೂ ಇಂತಹುದೇ ಘಟನೆ ವರದಿಯಾಗಿದ್ದು, ಭಾರಿಮಳೆ ನಡುವೆ ಸಿಡಿಲು ಬಡಿದು ಅಸ್ವಸ್ಥರಾಗಿದ್ದ ವ್ಯಕ್ತಿಯೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಲ್ಲೂ ಭಾರಿ ಮಳೆ: ಬೆಳ್ಳಂದೂರು, ಜೆಸಿ ರಸ್ತೆ, ಕಾರ್ಪೋರೇಷನ್ ವೃತ್ತ ಸೇರಿ ನಗರಾದ್ಯಂತ ಹಲವೆಡೆ ಮಳೆ ನೀರಿನ ಪ್ರವಾಹ ಪರಿಸ್ಥಿತಿ ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದ್ದು, ಜೆಸಿ ರಸ್ತೆ, ಕಾರ್ಪೊರೇಷನ್ ವೃತ್ತ ಸೇರಿದಂತೆ ನಗರಾದ್ಯಂತ ಹಲವೆಡೆ ಮಳೆ ನೀರಿನ ಪ್ರವಾಹ ಪರಿಸ್ಥಿತಿ ಉಂಟಾಗಿ ಭಾರಿ ಟ್ರಾಫಿಕ್? ಜಾಮ್ ಉಂಟಾಗಿದೆ. ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದ್ದು, ಜೆಸಿ ರಸ್ತೆ, ಕಾರ್ಪೊರೇಷನ್ ವೃತ್ತ, ಶಾಂತಿನಗರ, ಜಯನಗರ, ಕೆಆರ್? ಮಾರುಕಟ್ಟೆ, ವಿಜಯನಗರ, ಮೆಜೆಸ್ಟಿಕ್, ಬನಶಂಕರಿ, ಜೆಪಿನಗರ, ರಾಜಾಜಿನಗರ ಸೇರಿದಂತೆ ಹಲವೆಡೆ ಮಳೆ ಸುರಿಯುತ್ತಿದೆ. ನಗರದ ತಗ್ಗು ಪ್ರದೇಶಗಳ ರಸ್ತೆಗಳು ಜಲಾವೃತಗೊಂಡಿದ್ದು, ದ್ವಿಚಕ್ರ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರಿನ ರಾಮಮೂರ್ತಿ ನಗರದ ಚರ್ಚ್ ರಸ್ತೆಯಲ್ಲಿ ಭಾರಿ ಮಳೆಯಿಂದಾಗಿ ಒಳಚರಂಡಿಗಳು ತುಂಬಿ ಹರಿಯುತ್ತಿವೆ. ರಸ್ತೆ ಮೇಲೆ ಮೊಣಕಾಲುದ್ದ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇತ್ತ ಬೆಳ್ಳಂದೂರಿನ ಇಕೋಸ್ಪೋಸ್ ಪ್ರದೇಶದಲ್ಲಿ ಮತ್ತೆ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ರಸ್ತೆ ಮೇಲೆ 2 ಅಡಿಗಳಷ್ಟು ಎತ್ತರಕ್ಕೆ ನೀರು ನಿಂತಿದೆ.
ಮುAದಿನ 3 ಗಂಟೆಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಗುಡುಗು, ಮಿಂಚಿನಿAದ ಕೂಡಿದ ಮಳೆಯಾಗಲಿದೆ, ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಹೇಳಲಾಗಿದೆ. ಎಚ್ಎಎಲ್ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಳೆ ಆರಂಭಕ್ಕೆ ದಿನಗಣನೆ: ಕರ್ನಾಟಕದಲ್ಲಿ ಪೂರ್ವ ಮುಂಗಾರು ಗುಡುಗು, ಸಿಡಿಲಿನ ಸಮೇತ ಅಬ್ಬರಿಸುತ್ತಿದೆ. ಜೂನ್ 1ರ ವರೆಗೆ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವ ಮುಂಗಾರಿನ ಪರಿಣಾಮ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಎಚ್ಚರಿಕೆ: ದುರ್ಬಲ ಮರದ ಕೊಂಬೆಗಳು ನೆಲಕ್ಕುರುಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮನೆಯೊಳಗೆ ಇರಿ ಕಿಟಕಿ ಬಾಗಿಲುಗಳನ್ನು ಮುಚ್ಚಿ ಸಾಧ್ಯವಾದರೆ ದೂರ ಪ್ರಯಾಣಗಳನ್ನು ತಪ್ಪಿಸಿ ಮರದ ಕೆಳಗೆ ಆಶ್ರಯ ಪಡೆಯಬೇಡಿ.. ಕಾಂಕ್ರೀಟ್ ಗೋಡೆಗಳಿಗೆ ಒರಗಬೇಡಿ ತಕ್ಷಣವೇ ವಿದ್ಯುತ್ ಎಲೆಕ್ಟಾçನಿಕ್ ಉಪಕರಣಗಳನ್ನು ಅನ್ ಪ್ಲಗ್ ಮಾಡಿ.. ತಕ್ಷಣ ಜಲಮೂಲಗಳಿಂದ ಹೊರ ಬನ್ನಿ.. ಬೈಕ್, ವಾಹನ ಚಲಾಯಿಸುತ್ತಿದ್ರೆ ಎಚ್ಚರವಹಿಸಿ.