ಮೇಷ ರಾಶಿ : ಸ್ನೇಹವು ಕಡಿಮೆಯಾಗಬಹುದು. ನಿಮಗೆ ಆಪ್ತರ ಜೊತೆ ಮಾತನಾಡದೇ ನೆಮ್ಮದಿಯು ಸಿಗದೇಹೋದೀತು. ಹೆಚ್ಚು ನಿರುಪಯುಕ್ತ ಮಾತುಗಳು ನಿಮ್ಮಿಂದ ಬರಬಹುದು. ತನ್ನವರ ಬಗ್ಗೆ ನಂಬಿಕೆ ಇರದು. ಮಾತನ್ನು ಕಡಿಮೆ ಮಾಡಿ ಏಕಾಂಗಿಯಾಗಿ ಇರುವಿರಿ. ನಿಮಗೆ ಹಲವು ದಿನಗಳಿಂದ ಬಯಸಿದ್ದು ಸಿಗಬಹುದು. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ಬರಲಿವೆ. ಮೋಜಿಗಾಗಿ ಹಣವನ್ನು ವ್ಯಯಿಸುವಿರಿ. ಪುಣ್ಯಸ್ಥಳಗಳಿಗೆ ಹೋಗುವ ಮನಸ್ಸಿದ್ದರೂ ಕಾರ್ಯದ ಒತ್ತಡದಿಂದ ಅದು ಸಾಧ್ಯವಾಗದು. ಅನಿರೀಕ್ಷಿತ ಸಂಪತ್ತು ನಿಮ್ಮನ್ನು ಬಂದು ಸೇರಬಹುದು. ನಿಮ್ಮ ಸಂತಸಕ್ಕೆ ಮಿತಿ ಇರದು. ಸಜ್ಜನರ ಸಹವಾಸವನ್ನು ಇಷ್ಟಪಡುವಿರಿ. ಸುಬ್ರಹ್ಮಣ್ಯನ ಸ್ತುತಿಯು ನಿಮಗೆ ಶುಭವಿರಲಿದೆ.
ವೃಷಭ ರಾಶಿ : ಸ್ವತಃ ಉದ್ಯೋಗವನ್ನು ಮಾಡುವ ಆಲೋಚನೆಯು ಬರಬಹುದು. ಅಪರಿಚಿತರ ಜೊತೆ ಸಲುಗೆಯಿಂದ ಇರುವಿರಿ. ಆಲಸ್ಯವು ನಿಮಗೆ ಎಲ್ಲ ಕಾರ್ಯದಲ್ಲಿ ಹಿನ್ನಡೆ ತಂದೀತು. ಉತ್ತಮ ವಸ್ತುಗಳ ಖರೀದಿ ಮಾಡುವಿರಿ. ಸಂತೋಷದಿಂದ ನೀವು ಹೆಚ್ಚು ದಿನವನ್ನು ಕಳೆಯುವಿರಿ. ಬಂಧುಗಳ ಮಾತಿನಿಂದ ನಿಮಗೆ ಬೇಸರವಾಗುವುದು. ಸಂಗಾತಿಯ ಜೊತೆ ವಾಗ್ವಾದ ಮಾಡುವಿರಿ. ಇಂದು ಕಛೇರಿಯಲ್ಲಿ ಆದ ಕಲಹವು ಉದ್ಯೋಗವನ್ನು ಕಳೆದುಕೊಳ್ಳುವ ಮಟ್ಟಕ್ಕೂ ಹೋಗುವುದು. ತಮಾಷೆಯ ಮಾತುಗಳೂ ನಿಮಗೆ ಸರಿಯಾದ ತೊಂದರೆ ತಂದೀತು. ಒಂದೇ ವಿಚಾರವನ್ನು ಹಲವರಿಂದ ಕೇಳುವಿರಿ.
ಮಿಥುನ ರಾಶಿ : ಭವಿಷ್ಯದ ಬಗ್ಗೆ ನಿಮಗೆ ಏನೇನೋ ಆಲೋಚನೆಗಳು ಬರಬಹುದು. ಮಾತಿನ ಅಸ್ಪಷ್ಟತೆಯು ಕೇಳುಗರಿಗೆ ಕಷ್ಟವಾದೀತು. ಸಣ್ಣ ವ್ಯಾಪಾರಿಗಳಿಗೆ ಅಲ್ಪ ಲಾಭವು ಆಗುವುದು. ಕಲಾವಿದರು ಹೆಚ್ಚು ಶ್ರಮ ಹಾಕಿದರೆ ತಮ್ಮ ಕಾರ್ಯದಲ್ಲಿ ಯಶಸ್ಸನ್ನು ಸಾಧಿಸಿಯಾರು. ನಿಮ್ಮ ಕಾರ್ಯಕ್ಕೆ ವಿರೋಧಿಗಳ ಪ್ರಶಂಸೆಯೂ ಸಿಗಬಹುದು. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ತೋರಿಸಬಹುದು. ಸಾಮಾಜಿಕ ಕಾರ್ಯಗಳನ್ನು ಮಾಡಲು ನಿಮಗೆ ಇಂದು ಉತ್ಸಾಹ ಇರಲಿದೆ. ಮನಸ್ಸಿನಲ್ಲಿ ಯಾವುದಾದರೂ ಭೀತಿಯು ಕಾಡಬಹುದು. ಅತಿಯಾಯದೆ ಆಸೆಯಿಂದ ನಿಮಗೆ ದುಃಖವಿದೆ. ನಿಮ್ಮ ಬಗ್ಗೆ ನೀವು ಸ್ವಲ್ಪ ಅವಲೋಕನ ಮಾಡಿಕೊಳ್ಳಿ. ಎಲ್ಲವನ್ನೂ ನೀವು ಅತಿಯಾಗಿಸುವಿರಿ. ಇಂದು ಸಿಗಬೇಕಾದ ಕಾಲಕ್ಕೆ ಸಿಗುವುದು ಎಂಬ ನಂಬಿಕೆ ಇರಲಿ.
ಕರ್ಕ ರಾಶಿ : ಕಿರಿಯರಿಂದ ನೀವು ಸಲ್ಲದ ಮಾತನ್ನು ಕೇಳುವಿರಿ. ಉದ್ಯೋಗದಲ್ಲಿ ನಿಮಗೆ ಬೆಂಬಲಿಸುವವರು ಹೆಚ್ಚಿರಬಹುದು. ಸಂಗಾತಿಯು ನಿಮ್ಮ ಬಗ್ಗೆ ಸರಿಯಾಗಿ ತಿಳಿದುಕೊಳ್ಳದೇಹೋಗಬಹುದು. ನಿಮಗೆ ಕೆಲವು ವಿಚಾರದಲ್ಲಿ ಕಾನೂನಿನ ತೊಂದರೆ ಕಾಡಬಹುದು. ಎಲ್ಲರಿಂದ ಹೊಗಳಿಸಿಕೊಳ್ಳಬೇಕು ಎಂದು ಅನ್ನಿಸಬಹುದು. ಸ್ತ್ರೀಯರಿಗೆ ಮನೆಯ ಕೆಲಸವು ಸಾಕೆನಿಸಿ ಹೊರಗೆ ಹೋಗಬೇಕು ಎನಿಸಬಹುದು. ಬಂಧುಗಳ ಬಗ್ಗೆ ನಿಮಗೆ ಪ್ರೀತಿ ಕಡಿಮೆ ಆದೀತು. ಅಸಭ್ಯ ಮಾತುಗಳಿಂದ ನಿಮ್ಮ ನಡವಳಿಕೆಯು ಗೊತ್ತಾಗುವುದು. ಅಧಿಕಾರವು ನಿಮ್ಮಿಂದ ತಪ್ಪಿಹೋಗಬಹುದು. ಸರಿಯಾಗಿ ಯೋಜನೆ ಮಾಡಿಕೊಳ್ಳದೇ ಕಾರ್ಯವನ್ನು ಆರಂಭಿಸುವಿರಿ. ಮೇಲ್ನೋಟಕ್ಕೇ ನಿಮ್ಮ ಸ್ವಭಾವದ ಗೊತ್ತಾಗುವುದು. ಕುಲದೇವರ ಆರಾಧನೆಯನ್ನು ಮಾಡಿ.
ಸಿಂಹ ರಾಶಿ : ವೈವಾಹಿಕ ಜೀವನವನ್ನು ನಡೆಸಲು ನಿಮಗೆ ಕಷ್ಟ ಎನಿಸಬಹುದು. ಸಂಗಾತಿಯೂ ನಿಮಗೆ ಮಾನಸಿಕವಾಗಿ ಘಾಸಿ ಮಾಡಬಹುದು. ನಿಮ್ಮ ಮನಸ್ಸಿನ ತಾದಾತ್ಮ್ಯದಿಂದ ನಿಮಗೆ ಕಷ್ಟದ ಪೂರ್ಣ ಪ್ರಭಾವವು ನಿಮ್ಮ ಮೇಲೆ ಆಗದೇಹೋದೀತು. ಮಕ್ಕಳಿಗೆ ಶಿಸ್ತನ್ನು ಕಲಿಸಲು ನಿಮಗೆ ಆಗದೇ ಹೋದೀತು. ನಿಮ್ಮ ಇಂದಿನ ಮುಖ್ಯ ಕೆಲಸವೇ ಗೌಣವಾಗಬಹುದು. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲ್ಲು ಪತ್ನಿಯಿಂದ ಪ್ರಚೋದಿತರಾಗುವಿರಿ. ಉದ್ಯೋಗದ ಪಡೆಯಲು ನೀವು ಕಾದು ಸಮಯವನ್ನು ಹಾಳು ಮಾಡುವಿರಿ. ನೀವು ಮಾತನ್ನು ಕಡಿಮೆ ಮಾಡುವುದು ಉತ್ತಮ. ಕೂಡಿಬರುವ ವಿವಾಹಭಾಗ್ಯವನ್ನು ನೀವು ಒಪ್ಪಿಕೊಳ್ಳುವಿರಿ. ಆತುರದಿಂದ ಏನಾದರೂ ಅಚಾತುರ್ಯವನ್ನು ಮಾಡಿಕೊಳ್ಳಬಹುದು. ಧಾರ್ಮಿಕ ವಿಚಾರದ ಬಗ್ಗೆ ಆಸಕ್ತಿ ಹೆಚ್ಚಾಗುವುದು.
ಕನ್ಯಾ ರಾಶಿ : ನಿಮಗೆ ಅನಾಥಪ್ರಜ್ಞೆಯು ಕಾಡಲಿದ್ದು ದುಃಖವು ಉಮ್ಮಳಿಸಿ ಬರವುದು. ಇಂದಿನ ದೂರಪ್ರಯಾಣವು ನಿರಾಶಾದಾಯಕವಾಗಿದ್ದು ಎಲ್ಲರನ್ನೂ ಹೀಗಳೆಯುವಿರಿ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಗೊಂದಲವು ನಿವಾರಣೆಯಾಗುವುದು. ನಿಮ್ಮ ನಿರೀಕ್ಷೆಯ ಸಮಯವು ಬಾರದೇ ನಿಮಗೆ ಬೇಸರವಾಗುವುದು. ಅತಿಯಾದ ಚಿಂತೆಯಿಂದ ಆರೋಗ್ಯವನ್ನು ಹಾಳು ಮಾಡಿಕೊಳ್ಳುವಿರಿ. ಬೇಕಾದಷ್ಟು ಸಂಪತ್ತಿದ್ದರೂ ನಿಮಗೆ ಸರಿಯಾದ ನೆಮ್ಮದಿಯ ಸಿಗದು. ಇಂದು ನೀವು ಕೃತಜ್ಞತೆಯನ್ನು ಮರೆಯುವಿರಿ. ಸಂಬಂಧಗಳ ಮಹತ್ತ್ವವನ್ನು ನೀವು ಅರಿತುಕೊಳ್ಳಲಾರಿರಿ. ವಿಶ್ವಾಸಕ್ಕೆ ಘಾಸಿಯಾಗದಂತೆ ನಡೆದುಕೊಳ್ಳುವಿರಿ. ಅಧಿಕಾರಿಗಳು ನಿಮಗೆ ತೊಂದರೆಯನ್ನು ಕೊಡಬಹುದು. ಯಾರೂ ನಿಮ್ಮ ಮಾತಿಗೆ ಲಕ್ಷ್ಯ ಕೊಡದೇಹೋಗಬಹುದು.
ತುಲಾ ರಾಶಿ : ಸಮಯದ ದುರುಪಯೋಗವನ್ನು ಮಾಡಿಕೊಳ್ಳುವಿರಿ. ನಿಮಗೆ ಕಛೇರಿಯಲ್ಲಿ ಪ್ರಶಂಸೆಯು ಸಿಗಬಹುದು. ಕೆಲವರು ನಿಮ್ಮ ಬಗ್ಗೆ ಆಡಿಕೊಳ್ಳಬಹುದು. ವಿಶ್ವಾಸಕ್ಕೆ ಯೋಗ್ಯವಾದ ಕೆಲಸವನ್ನು ಮಾಡುವಿರಿ. ಮಾನಸಿಕ ಅಶಾಂತಿಗೆ ನಿಮ್ಮಲ್ಲಿಯೇ ಮದ್ದು ಇರುವುದು. ನಿಮ್ಮ ಶಿಸ್ತಿನ ಜೀವನವನ್ನು ಯಾರೂ ಕೇಳರು. ಹಣದ ವ್ಯವಹಾರವನ್ನು ಆಪ್ತರ ಜೊತೆ ಸೇರಿ ಮಾಡುವುದು ಉತ್ತಮ. ನಂಬಿಕಸ್ಥರನ್ನು ಮಾತ್ರ ನಿಮ್ಮ ಹತ್ತಿರ ಸೇರಿಸಿಕೊಳ್ಳುವಿರಿ. ಎಲ್ಲ ವಿಚಾರಕ್ಕೂ ನೀವು ಇನ್ನೊಬ್ಬರನ್ನು ಹಗುರಾಗಿ ಕಾಣುವಿರಿ. ಬಿಡುವಿನ ಸಮಯದಲ್ಲಿ ನಿಮ್ಮ ಕಾರ್ಯವನ್ನು ಮಾಡಿಕೊಳ್ಳುವಿರಿ. ಸ್ವಂತ ಉದ್ಯಮವನ್ನು ಆರಂಭಿಸಲು ಚಿಂತಿಸುವಿರಿ. ನಿಮ್ಮ ಕೆಲವು ಮಾತುಗಳು ಕುಟುಂಬದ ಗೌರವವನ್ನು ತಗ್ಗಿಸೀತು. ಹೆಚ್ಚು ಆಹಾರದ ಸೇವೆಯಿಂದ ಕಷ್ಟವಾದೀತು. ಇಂದು ಭೂಮಿಯ ವ್ಯವಹಾರದ ಕಡೆ ಗಮನ ಹರಿಸಲು ಇಷ್ಟವಾಗದು.
ವೃಶ್ಚಿಕ ರಾಶಿ : ಮಕ್ಕಳಿಗೆ ಮನೆಯ ಜವಾಬ್ದಾರಿಯನ್ನು ಕೊಟ್ಟು ನಿಶ್ಚಿಂತರಾಗಲು ಇಷ್ಟಪಡುವಿರಿ. ವೃತ್ತಿಯಲ್ಲಿ ಕಾರ್ಯವು ಸರಿಯಾಗದೇ ಸಂಕಷ್ಟಕ್ಕೆ ಬೀಳುವಿರಿ. ಅಧಿಕಾರಿಗಳಿಂದ ನಿಮಗೆ ಅಪಮಾನವೂ ಆದೀತು. ವಿದ್ಯಾಭ್ಯಾಸದ ಸಮಸ್ಯೆಯನ್ನು ನೀವು ಬಗೆಹರಿಸಿಕೊಳ್ಳುವಿರಿ. ನಿಮ್ಮ ಸಹಜ ವರ್ತನೆಯೂ ನಿಮ್ಮರಿಗೆ ಸಿಟ್ಟನ್ನು ತರಿಸಬಹುದು. ಪಕ್ಷಪಾತ ಮಾಡದೇ ನೀವು ಸಮಾನಭಾವದಿಂದ ಕಾಣಬೇಕಾದೀತು. ದೇಹವನ್ನು ದಂಡಿಸಿ ಹೆಚ್ಚು ಲಾಭವನ್ನು ಗಳಿಸುವಿರಿ. ನಿಮಗೆ ಇಂದು ಕಾರ್ಯಗಳನ್ನು ಮಾಡಿಸಲು ಆಗದು. ನಿಮ್ಮ ಮಾತನ್ನು ಯಾರೂ ಕೇಳರು. ಉದರಕ್ಕೆ ಸಂಬಂಧಿಸಿದ ರೋಗವು ಕಾಣಿಸಿಕೊಂದು ಒದ್ದಾಡುವಿರಿ. ಇನ್ನೊಬ್ಬರ ಜೊತೆ ನಿಮ್ಮನ್ನು ತುಲನೆ ಮಾಡಿಕೊಳ್ಳುವುದು ಬೇಡ. ನಿಮಗೆ ನೆಮ್ಮದಿಯು ಕಡಿಮೆ ಆಗುವುದು.
ಧನು ರಾಶಿ : ಚಂಚಲ ಮನಃಸ್ಥಿತಿಯು ನಿಮ್ಮ ಕಛೇರಿಯ ಕೆಲಸಗಳನ್ನು ಅಸ್ತವ್ಯಸ್ತ ಮಾಡಬಹುದು. ನೂತನ ವಸ್ತ್ರ, ವಸ್ತುಗಳ ಖರೀದಿಗೆ ಹೆಚ್ಚು ಸಮಯವನ್ನು ಕೊಡಬೇಕಾದೀತು. ನಿಮ್ಮ ಅಂದಾಜಿನ ಆದಾಯವನ್ನು ತಲುಪುವಿರಿ. ವಿಳಂಬವಾಗಿ ನಡೆಯುವ ವಿವಾಹಕ್ಕೆ ಸಂತೋಷವಿರಲಿದೆ. ಮಕ್ಕಳ ವಿವಾಹಕ್ಕಾಗಿ ಓಡಾಟ, ಮಾತುಕತೆಗಳನ್ನು ಮಾಡಬೇಕಾದೀತು. ದಾಂಪತ್ಯದಲ್ಲಿ ಬರುವ ಕಲಹವನ್ನು ಸುಮ್ಮನಿದ್ದು ಶಾಂಯಗೊಳಿಸಿ. ನಿಮಗೆ ಸ್ವಾಭಿಮಾವನ್ನು ಬಿಟ್ಟು ವ್ಯವಹರಿಸುದು ಸಾಧ್ಯವಾಗದು. ಸಂಕೋಚದ ಸ್ವಭಾವದಿಂದ ನೀವು ಬಂದ ಅವಕಾಶವನ್ನು ಕೈ ಬಿಡುವಿರಿ. ಕೆಲವರು ನಿಮ್ಮ ಮಾತನ್ನು ವಿರೋಧಿಸುವರು. ನಿಮಗೆ ಆಗದವರ ಬಗ್ಗೆ ನಿಮ್ಮ ನಿಲುವು ಬದಲಾಗಬಹುದು. ಇಂದು ಸಾಮಾಜಿಕ ಗೌರವವನ್ನು ಬಯಸುವಿರಿ. ಹಳೆಯ ಪ್ರೇಮವು ನಿಮ್ಮನ್ನು ಕಾಡಬಹುದು. ಚಾಲಕವೃತ್ತಿಯರಿಗೆ ಅಪಮಾನವಾಗಬಹುದು.
ಮಕರ ರಾಶಿ : ನಿಮ್ಮ ಕುಲ ಕಸುಬಿಗೆ ತೊಂದರೆ ಆದೀತು. ಓಡಾಟದಲ್ಲಿ ಕೆಲವು ಅಡೆತಡೆಗಳ ಬರಬಹುದು. ನಿಮ್ಮ ದೌರ್ಬಲ್ಯಗಳಿಂದ ನಿಮಗೆ ತೊಂದರೆ ಆಗುವ ಸಾಧ್ಯತೆ ಇದೆ. ವ್ಯಕ್ತಿತ್ವದಲ್ಲಿ ಬದಲಾದಂತೆ ಕಾಣುವಿರಿ. ಆರ್ಥಿಕತೆಯ ಬೆಳವಣಿಗೆಯು ನಿಮಗೆ ಸಂತೋಷವನ್ನು ಕೊಡುವುದು. ಕುಟುಂಬಕ್ಕೆ ನಿಮ್ಮಿಂದ ಶುಭ ವಾರ್ತೆಯು ಬರಬಹುದು. ಹಿತಶತ್ರುಗಳನ್ನು ಇಂದು ಅವರಾಡುವ ಮಾತುಗಳಿಂದ ಗುರುತಿಸುವಿರಿ. ನಿಮ್ಮ ಸಹೋದರನಿಂದ ಹೊಸ ಉದ್ಯೋಗಕ್ಕೆ ಸೇರಿಕೊಳ್ಳುವಿರಿ. ಮಕ್ಕಳ ವಿದ್ಯಾಭ್ಯಾಸಕ್ಕೆ ಕೂಡಿಟ್ಟ ಹಣವು ಸಾಕಾಗದೇ ಸಾಲವನ್ನು ಮಾಡಬೇಕಾದೀತು. ಇಂದು ನೀವು ಅಂದುಕೊಂಡಷ್ಟು ಕೆಲಸವು ಆಗುವತನಕ ಫಲವನ್ನು ಬಿಡುವುದಿಲ್ಲ.
ಕುಂಭ ರಾಶಿ : ವ್ಯವಹಾರದಲ್ಲಿ ಇಂದು ನಿಮ್ಮ ಚುರುಕುತನ ಸಾಕಾಗದು. ತಾಯಿಯ ಕಡೆಯಿಂದ ಧನದ ನಿರೀಕ್ಷೆಯಲ್ಲಿ ಇರುವಿರಿ. ಹಲವರ ಅಭಿಪ್ರಾಯದಿಂದ ನಿಮಗೆ ಗೊಂದಲವಾಗುವುದು. ಇಂದು ಹಳೆಯ ತಪ್ಪಿಗೆ ನೀವು ಪಶ್ಚಾತ್ತಾಪ ಪಡಪಡುವಿರಿ. ನಿಮ್ಮ ನಿರ್ಮಾಣದ ಕಾರ್ಯಗಳು ನಿಧಾನವಾಗುವುದು. ಪ್ರಯಾಣದಲ್ಲಿ ನೀವು ತೊಂದರೆಯನ್ನು ಅನುಭವಿಸಬೇಕಾದೀತು. ಆತುರದಲ್ಲಿ ಯಾವ ಕೆಲಸವನ್ನೂ ಮಾಡಲು ಹೋಗುವುದು ಬೇಡ. ನೀವು ಕೊಟ್ಟ ಸಾಲವು ಪುನಃ ಬರಬಹುದು. ನಿಮ್ಮ ಕುಟುಂಬದ ವಿಚಾರವನ್ನು ನೀವು ಆಪ್ತರ ಜೊತೆ ಹಂಚಿಕೊಳ್ಳುವಿರಿ. ಅನಗತ್ಯ ಖರ್ಚನ್ನು ಕಡಿಮೆ ಮಾಡಲು ಸಂಗಾತಿಗೆ ಹೇಳುವಿರಿ. ಹನುಮಾನ್ ಚಾಲೀಸ್ ಪಠನವನ್ನು ಮಾಡಿ.
ಮೀನ ರಾಶಿ : ಇಂದು ನೀವು ನಿಮ್ಮ ಕುಟುಂಬದವರ ಜೊತೆ ಅಧಿಕ ಕಾಲವನ್ನು ಕಳೆಯುವಿರಿ. ಆರ್ಥಿಕತೆಯಲ್ಲಿ ಸ್ವಲ್ಪ ಚೇತರಿಕೆ ಇದ್ದು ನಿಮಗೆ ನೆಮ್ಮದಿಯೂ ಸಿಗಲಿದೆ. ತಾಯಿಯು ನಿಮ್ಮನ್ನು ಬೆಂಬಲಿಸುವಳು. ಸ್ಥಿರಾಸ್ತಿಯ ಉಳಿವಿಗೆ ಹೋರಾಟವನ್ನೇ ಮಾಡಬೇಕಾದೀತು. ಇಂದು ನೀವು ಬಂಧುಗಳ ಬಳಿ ಸಾಲಕ್ಕೆ ಕೈ ಚಾಚುವು ಬೇಡ. ಮನೆಯಲ್ಲಿ ಬಹಳ ಕಾರ್ಯಗಳಿದ್ದು ಅದರಲ್ಲಿ ತನ್ಮಯರಾಗುವಿರಿ. ನಿಮ್ಮ ವಸ್ತುಗಳನ್ನು ಜೋಪಾನವಾಗಿ ಇರಿಸಿಕೊಳ್ಳಿ. ಸಂಗಾತಿಯು ನಿಮ್ಮ ನಡವಳಿಕೆಯನ್ನು ಪ್ರಶ್ನಿಸಬಹುದು. ಹಳೆಯ ಸಾಲವನ್ನು ಉಳಿಸಿಕೊಂಡೇ ಮತ್ತೊಂದು ಸಾಲವನ್ನು ಮಾಡಬೇಕಾದೀತು. ಸ್ನೇಹಿತರು ನಿಮ್ಮ ಜೊತೆಗಿರುವುದು ನಿಮಗೆ ಧೈರ್ಯ ಬರಲಿದೆ. ಯಾವದೇ ಉದ್ವೇಗಕ್ಕೆ ಒಳಗಾಗದೇ ಸಮಾಧಾನದ ಮನಃಸ್ಥಿತಿಯಲ್ಲಿ ಇರಿ. ಆದಾಯವನ್ನು ಹೆಚ್ಚಿಸಿಕೊಳ್ಳುವ ತುಡಿತವು ಅಧಿಕವಾಗಬಹುದು.