ಮೇಷ ರಾಶಿ: ದುರಾಸೆ ಪಡದೆ ಬಂದಿದ್ದನ್ನು ಸ್ವೀಕರಿಸಿ ದೊಡ್ಡವರಾಗುವಿರಿ. ನಿಮಗೆ ತಿಳಿದ ವಿಚಾರವನ್ನು ಬೇರೆಯವರಿಗೆ ಯಾವುದೇ ನಿರೀಕ್ಷೆಯಿಲ್ಲದೆ ಹೇಳಿಕೊಡುವಿರಿ. ದಾಂಪತ್ಯದ ಸುಖವು ನಿಮಗೆ ಹೆಚ್ಚು ಇಷ್ಟವಾದೀತು. ಮನಸ್ಸಿನಲ್ಲಿ ಸಂಯಮವಿರಲಿ. ಮಾನಸಿಕವಾಗಿ ಕುಗ್ಗಿರುವಿರಿ. ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಅನವಶ್ಯಕ ವಾದ ವಿವಾದವು ಆಗಬಹುದು. ನಿಮ್ಮ ತಪ್ಪಿಗೆ ಬೇರೆಯವರನ್ನು ಬೆರಳು ಮಾಡುವಿರಿ. ಸಹಾಯವನ್ನು ಯಾವುದೇ ಮುಲಾಜಿಲ್ಲದೇ ಕೇಳುವಿರಿ.
ವೃಷಭ ರಾಶಿ: ಆಸ್ತಿ ಸಂಬಂಧಿತ ಕೆಲಸವನ್ನು ಪೂರ್ಣಗೊಳಿಸಲು ಇದು ಸರಿಯಾದ ಸಮಯ. ಸಾಹಸಕ್ಕೆ ಕೈಹಾಕುವುದು ಬೇಡ. ನೆಮ್ಮದಿಯನ್ನು ನೀವು ಹಾಳುಮಾಡಿಕೊಳ್ಳುವಿರಿ. ಸಂಗಾತಿಯಿಂದ ಸಿಗುವ ಸುಖದಿಂದ ನೀವು ವಂಚಿತರಾಗುವಿರಿ. ಇಂದಿನ ನಿಮ್ಮ ನಿರೀಕ್ಷೆಗಳು ಹುಸಿಯಾಗಬಹುದು. ವ್ಯಕ್ತಿಯ ಆಯ್ಕೆಯಲ್ಲಿ ನೀವು ಸೋಲುವಿರಿ. ನೀವು ಇಂದು ಅಸಹಜವಾಗಿ ನಡೆದುಕೊಳ್ಳುವಿರಿ. ಆಲಸ್ಯವು ಅಧಿಕವಾಗಬಹುದು. ಸಾಧಿಸಲಾಗದ ಕೆಲಸಕ್ಕೆ ಹೆಚ್ಚು ಶ್ರಮವನ್ನು ಹಾಕುವಿರಿ. ಸ್ನೇಹಸಂಬಂಧಗಳನ್ನು ದೂರ ಮಾಡಿಕೊಳ್ಳುವಿರಿ. ಸ್ತ್ರೀಯರು ವಿಶೇಷವಾಗಿ ಸಮಾಜದ ಪ್ರಮುಖ ಸ್ಥಾನವನ್ನು ಅಲಂಕರಿಸುವರು.
ಮಿಥುನ ರಾಶಿ: ವಿದ್ಯಾಭ್ಯಾಸದಲ್ಲಿ ಅತಂತ್ರ ಸ್ಥಿತಿಯು ಬರಬಹುದು. ಅವಶ್ಯಕತೆ ಇರುವಷ್ಟು ಮಾತ್ರ ಮಾತನಾಡಿ. ನಿಮಗೆ ಅತಿಥಿ ಸತ್ಕಾರವು ನಡೆಯಬಹುದು. ರಾಜಕೀಯದಿಂದ ಹೊರಬರಲು ಮನಸ್ಸಾಗುವುದು. ಅನಿರೀಕ್ಷಿತ ಅಮೂಲ್ಯ ವಸ್ತುಗಳು ಪ್ರಾಪ್ತವಾಗುವುದು. ಇಂದಿನ ಅಧಿಕ ಸಮಯದಲ್ಲಿ ಮೌನವಾಗಿಯೇ ಇರುವಿರಿ. ಯಾವುದೋ ಹತ್ತಾರು ವಿಚಾರದಲ್ಲಿ ನೀವು ಒತ್ತಡಕ್ಕೆ ಒಳಗಾಗುವಿರಿ. ನೇರ ಮಾತಿನಿಂದ ಬೇಸರವನ್ನು ಉಂಟುಮಾಡುವಿರಿ. ಕಳೆದುಕೊಂಡಿದ್ದರ ಬಗ್ಗೆ ಹೆಚ್ಚು ಆಲೋಚನೆಯು ಇರಲಿದೆ. ನಿಮ್ಮ ಬಗ್ಗೆ ಸಕಾರಾತ್ಮಕ ಮಾತುಗಳು ಕೇಳಿಬರಬಹುದು.
ಕಟಕ ರಾಶಿ: ಮಕ್ಕಳ ವಿಚಾರದಲ್ಲಿ ಅಧಿಕ ಬದಲಾವಣೆ ಇರಲಿದೆ. ಪ್ರೀತಿಯು ಸುಖಾಂತ್ಯ ಕಾಣಬಹುದು. ವ್ಯಾಪಾರಸ್ಥರು ಶ್ರಮದಾಯಕ ಲಾಭವನ್ನು ಮಾಡಿಕೊಳ್ಳುವರು. ದೇಹದ ಸಮಸ್ಯೆಯನ್ನು ನೀವು ಯಾರ ಬಳಿಯೂ ಹೇಳದೇ ಗೌಪ್ಯವಾಗಿ ಇಟ್ಟಕೊಳ್ಳುವಿರಿ. ವೃತ್ತಿಯಲ್ಲಿ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು. ಪ್ರಭಾವಿ ವ್ಯಕ್ತಿಗಳ ಭೇಟಿಯು ಸಂತೋಷವನ್ನು ಕೊಡುವುದು. ಉದ್ವೇಗದಿಂದ ಏನನ್ನಾದರೂ ಹೇಳಲು ಹೋಗಿ ನಗೆಪಾಟಲಿಗೆ ಸಿಕ್ಕಿಕೊಳ್ಳುವಿರಿ. ಭೂಮಿಯ ವ್ಯವಹಾರಕ್ಕೆ ಸಂಬಂಧಿಸಿದಂತೆ ನಿಮಗೆ ಉಪಯುಕ್ತ ಸಲಹೆಗಳು ಸಿಗ ಬಹುದು. ನಿಮ್ಮ ಕಾರ್ಯವನ್ನು ಕೊನೆಯಲ್ಲಿ ಬದಲಿಸುವುದು ನಿಮಗೆ ಸಿಟ್ಟು ತಂದೀತು.
ಸಿಂಹ ರಾಶಿ: ಸಾಲಗಾರರಿಗೆ ಚಿಂತೆ ಇರಲಿದೆ. ಪಾಲುದಾರಿಕೆಯಲ್ಲಿ ನಿಮಗೆ ಹೊಂದಾಣಿಕೆಯ ಕೊರತೆ ಆಗಬಹುದು. ಅನಿರೀಕ್ಷಿತ ವೆಚ್ಚವನ್ನು ಮಾಡಬೇಕಾಗಬಹುದು. ಪ್ರಯಾಣದಲ್ಲಿ ತೊಂದರೆಗಳು ಬಂದರೂ ತಲುಪಬೇಕಾದ ಸ್ಥಳಕ್ಕೆ ಹೋಗುವಿರಿ. ಮಾನಸಿಕ ಒತ್ತಡಗಳು ನಿಮ್ಮ ಕೆಲಸವನ್ನು ಹಾಳುಮಾಡುವುದು. ಸಂಗಾತಿಯ ಮೌನದಿಂದ ನಿಮಗೆ ಆತಂಕ ಹುಟ್ಟಬಹುದು. ಬೇಕಾದಷ್ಟು ಮಾತುಗಳು ಮಾತ್ರ ಆಡಿರಿ. ಇಷ್ಟಪಟ್ಟ ವಸ್ತುವು ಕಾಣೆಯಾಗುವುದು. ನಿಮಗೆ ನೇರವಾಗಿ ಸಂಬಂಧಪಟ್ಟ ವಿಚಾರಗಳ ಬಗ್ಗೆ ಮಾತ್ರ ಪ್ರವೇಶಿಸಿ. ಸಂಗಾತಿಯ ಮಾತುಗಳಿಂದ ನೀವು ಸಿಟ್ಟಾಗಬಹುದು. ಇಂದು ನಿಮ್ಮನ್ನು ಅಪರಿಚಿತರು ಭೇಟಿ ಮಾಡಬಹುದು.
ಕನ್ಯಾ ರಾಶಿ: ಉದ್ಯೋಗದ ಬದಲಾವಣೆ ಆಗಲಿದ್ದು ಸರಿಯಾದ ಪ್ರತ್ಯುತ್ತರ ಸಿಗದೇ ಬೇಸರವಾಗುವುದು. ನಿಮ್ಮ ನಿಯಮಗಳನ್ನು ನೀವೇ ಭಂಗ ಮಾಡಿಕೊಳ್ಳುವಿರಿ. ಎಚ್ಚರಿಕೆಯಿಂದ ನಿಮ್ಮ ಹೆಜ್ಜೆಯನ್ನು ಇಡಿ. ಅಳುಕಿನಿಂದ ಇರುವಿರಿ. ಇಂದು ಕೈಗೊಂಡ ಪ್ರವಾಸದಲ್ಲಿ ನಿಮಗೆ ತೃಪ್ತಿ ಸಿಗದು. ಯಾರದ್ದೋ ಮೂಲಕ ನೀವು ಶತ್ರುಗಳ ಯೋಜನೆಯನ್ನು ತಿಳಿಯುವಿರಿ. ಸಹನೆಯಿಂದ ಆಗುವ ಲಾಭವು ಅನುಭವಕ್ಕೆ ಬರಬಹುದು. ಮಕ್ಕಳು ನಿಮ್ಮ ಮಾತನ್ನು ಕೇಳದೇ ತಮಗೆ ತೋಚಿದಂತೆ ನಡೆದುಕೊಳ್ಳುವುದು ನಿಮಗೆ ಇಷ್ಟವಾಗದು. ಪದೋನ್ನತಿಯ ವಿಚಾರದಲ್ಲಿ ನಿಮಗೆ ಸ್ಪಷ್ಟ ಮಾಹಿತಿ ಸಿಗದು.
ತುಲಾ ರಾಶಿ: ವ್ಯವಹಾರದಲ್ಲಿ ಊಹಿಸಿದ್ದಕ್ಕಿಂತ ಹೆಚ್ಚಿನ ಲಾಭವು ಸಿಗಬಹುದು. ದುಡುಕಿ ಆಡಿದ ಮಾತಿನಿಂದ ಸತ್ಯವು ಹೊರಬರಬಹುದು. ಆಸ್ತಿಯ ಕಲಹವನ್ನು ನ್ಯಾಯಾಲಯಕ್ಕೆ ತಡಗೆದುಕೊಂಡು ಹೋಗುವಿರಿ. ವಿನಾಕಾರಣ ಯಾರ ಮೇಲಾದರೂ ಅಧಿಕಾರವನ್ನು ಚಲಾಯಿಸುವಿರಿ. ಸಂಗಾತಿಯಿಂದ ನಿಮಗೆ ನೂತನ ವಸ್ತ್ರಗಳು ಬರಬಹುದು. ನಿಮ್ಮ ಆದಾಯದ ಮೂಲವನ್ನು ಹೆಚ್ಚುಮಾಡಿಕೊಳ್ಳುವಿರಿ. ಕೆಲಸದಲ್ಲಿ ಪ್ರಾಮಾಣಿಕತೆ ಕಡಿಮೆ ಆದಂತೆ ತೋರಬಹುದು. ಪಾಲುದಾರಿಕೆಯಿಂದ ಹೊರಬರವುದು ಒಳ್ಳೆಯದು ಎಂದು ಅನ್ನಿಸಬಹುದು. ಸ್ಪರ್ಧಾಮನೋಭಾವವು ನಿಮಗೆ ಇಷ್ಟವಾಗದು. ನಿಮ್ಮ ಕಾರ್ಯಗಳು ಸೂಚನೆಯ ಅನುಸಾರವಾಗಿ ನಡೆಯಲಿ.
ವೃಶ್ಚಿಕ ರಾಶಿ: ಬಂಧುಗಳು ನಿಮ್ಮ ಸಮಸ್ಯೆಗೆ ಸ್ಪಂದಿಸುವರು. ವ್ಯಾಪಾರವು ಲಾಭಾಂಶವನ್ನು ಹೆಚ್ಚು ಪಡೆಯುವುದು. ಹುಡುಗಾಟದ ಬುದ್ಧಿಯಿಂದ ಕೆಲವು ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು. ಇಂದಿನ ಕಾರ್ಯದಲ್ಲಿ ಮುನ್ನಡೆಯಿರಲಿದ್ದು ನಿಮ್ಮ ಬಗ್ಗೆ ಸದಭಿಪ್ರಾಯವು ಇರುವುದು. ಸ್ಥಳ ಬದಲಾವಣೆಯಿಂದ ಹೊಂದಿಕೊಳ್ಳುವುದು ಕಷ್ಟವಾದೀತು. ಆಕಸ್ಮಿಕವಾದ ವಿಷಯದಿಂದ ನಿಮಗೆ ದುಃಖವಾಗುವುದು. ಕೊಡಬಹುದು. ಅಶಿಸ್ತಿನ ಜೀವನವು ನಿಮಗೆ ಸಮಾಧನಾವನ್ನು ಕೊಡದು. ನೀವು ಯಾರ ಮಾತನ್ನೂ ಕೇಳುವುದಿಲ್ಲ. ನಿಮ್ಮ ತಪ್ಪನ್ನು ಬೇರೆಯವರು ಎತ್ತಿ ಹೇಳುವುದು ನಿಮಗೆ ಸಿಟ್ಟು ಬರಬಹುದು.
ಧನು ರಾಶಿ: ಮಿತ್ರನ ನಂಬಿಕೆಯನ್ನು ಕಳೆದುಕೊಂಡು, ಆದ ನಷ್ಟಕ್ಕೆ ದುಃಖಿಸುವಿರಿ. ಸ್ಥಿರಾಸ್ತಿಯನ್ನು ವ್ಯವಹಾರ ಜ್ಞಾನದ ಕೊರತೆಯಿಂದ ಕಳೆದುಕೊಳ್ಳಬಹುದು. ಸಹೋದರರ ನಡುವೆ ಆರ್ಥಿಕ ಸಂಬಂಧವು ಉತ್ತಮವಾದುದು ಅಲ್ಲ. ವಯಸ್ಸಿಗೆ ಬಂದ ಮಕ್ಕಳ ವಿವಾಹದ ಚಿಂತೆ ಇರುಬುದು. ಪ್ರೀತಿಯಿಂದ ಕೊಟ್ಟ ವಸ್ತುವನ್ನು ಮತ್ತೆ ಕೊಡುವುದು ಬೇಡ. ಸಂಗಾತಿಯ ಜೊತೆ ಸಣ್ಣ ವಿಚಾರಗಳಿಗೂ ಜಗಳವಾಡುಬಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಆದ ಪ್ರಗತಿಯಿಂದ ನಿಮಗೆ ಸಂತೋಷವಾಗಲಿದೆ. ಸಮಯಸ್ಫೂರ್ತಿಯಿಂದ ಇಂದಿನ ಅನಾಹುತವನ್ನು ತಪ್ಪಿಸಿಕೊಳ್ಳುವಿರಿ.
ಮಕರ ರಾಶಿ: ನ್ಯಾಯಾಲಯದ ವಿಚಾರದಲ್ಲಿ ನಿಮ್ಮ ಊಹೆಯು ಸರಿಯಾಗದು. ಮನೆಯಲ್ಲಿ ಮಕ್ಕಳು ನಿಮ್ಮನ್ನು ಲೆಕ್ಕಕ್ಕೆ ತೆಗದುಕೊಳ್ಳದೇ ಹೋಗಬಹುದು. ವಿದ್ಯಾರ್ಥಿಗಳ ಕಲಿಕೆಯಲ್ಲಿ ಹಿನ್ನಡೆಯಾಗಲಿದೆ. ಇಂದಿನ ಹೆಚ್ಚಿನ ವಿಚಾರಗಳನ್ನು ನಕರಾತ್ಮಕವಾಗಿಯೇ ಚಿಂತಿಸುವಿರಿ. ದೂರ ಪ್ರಯಾಣವು ನಿಮಗೆ ಇಂದು ಅನಿವಾರ್ಯವಾದೀತು. ಸ್ವಂತ ವಾಹನದಿಂದ ನೀವು ಲಾಭವನ್ನು ಗಳಿಸುವಿರಿ. ಇಂದು ನಿಮಗೆ ಜೊತೆಗೆ ಯಾರೂ ಇಲ್ಲ ಎಂಬ ಅನಾಥಪ್ರಜ್ಞೆಯು ಕಾಡುವುದು. ಸಂಗಾತಿಯಿಂದ ಗೌರವವನ್ನು ಅಪೇಕ್ಷಿಸುವಿರಿ. ಇನ್ನೊಬ್ಬರ ಆಡಿದ ಮಾತು ಸತ್ಯವಾಗುವುದು ಎಂಬ ನಂಬಿಕೆ ಬರಬಹುದು.
ಕುಂಭ ರಾಶಿ: ಇಂದಿನ ಅನಾರೋಗ್ಯವು ಕುಟುಂಬದವರ ಆರೈಕೆಯಿಂದ ಕಡಿಮೆಯಾಗುವುದು. ಗೌಪ್ಯವಾಗಿ ನಿಮ್ಮ ಅಂತರಂಗವನ್ನು ತಿಳಿದುಕೊಳ್ಳಲು ಶತ್ರುಗಳು ಪ್ರಯತ್ನಿಸಬಹುದು. ಮಾತಿನ ಮೇಲೆ ನೀವು ಹಿಡಿತವನ್ನು ಸಾಧಿಸಬೇಕಾದೀತು. ಕಲಾವಿದರು ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳುವರು. ಮೇಲಧಿಕಾರಿಗಳ ಮಾತುಗಳು ನಿಮ್ಮನ್ನು ಕಾಡಬಹುದು. ಅತಿಯಾದ ಒತ್ತಡದಿಂದ ಮಾಡುವ ಕೆಲಸದಿಂದ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ನಿಮ್ಮ ಮಾತಿನ ಮೇಲೆ ನಂಬಿಕೆ ಕಡಿಮೆ ಆದೀತು. ಇಂದು ಶಿಸ್ತಿಗೆ ಹೆಚ್ಚಿನ ಗಮನವನ್ನು ಕೊಡುವಿರಿ.
ಮೀನ ರಾಶಿ: ಇಂದು ನಿಮಗೆ ಮಾತಿನಿಂದಾಗಿ ತೊಂದರೆಗಳು ಬರಬಹುದು. ಕುಟುಂಬದ ಸಮಸ್ಯೆಗೆ ಧಾರ್ಮಿಕ ಕಾರ್ಯವನ್ನು ಮಾಡಿ ಪರಿಹಾರವನ್ನು ಮಾಡಿಕೊಳ್ಳಲು ಇಚ್ಛಿಸುವಿರಿ. ಇಂದು ನೀವು ಅಂದುಕೊಂಡಂತೆ ಆಗಿದ್ದು ಖುಷಿಯಿಂದ ಇರುವಿರಿ. ವಾಹನ ಖರೀದಿಯ ಆಲೋಚನೆಯನ್ನು ಸದ್ಯ ಕೈ ಬಿಡುವಿರಿ. ಸ್ತ್ರೀಯರಿಂದ ಇಂದು ಸಹಾಯವನ್ನು ಪಡೆಯುವಿರಿ. ಬರಬೇಕಾದ ಹಣವನ್ನು ನೀವೇ ಖುದ್ದಾಗಿ ಹೋಗಿ ಪಡೆಯಬೇಕಾಗಬಹುದು. ಖರ್ಚಿಗೆ ಬರುವ ಎಲ್ಲ ಮಾರ್ಗವನ್ನೂ ನಿಲ್ಲಿಸುವಿರಿ. ಇಂದು ನಿಮ್ಮ ಬಂಧುಗಳ ಮನೆಯಲ್ಲಿ ಉಳಿಯುವುದು ಅನಿವಾರ್ಯವಾಗುವುದು. ವಿನಾಕಾರಣ ಪತ್ನಿಯನ್ನು ದ್ವೇಷಿಸುವಿರಿ.