13 ತಾರೀಖು ಬಿಜೆಪಿಯ ಶವ ಆಚರಣೆ
ಮೈಸೂರು: ಲಿಂಗಾಯತರು ಮತ್ತು ಒಕ್ಕಲಿಗರಿಗೆ ಮೀಸಲಾತಿ ಮತ್ತು ಒಳ ಮೀಸಲಾತಿ ಮತ್ತು ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳದ ಕುರಿತು ಬಿಜೆಪಿ ಸರ್ಕಾರದ ಆದೇಶವನ್ನು ಬೊಮ್ಮಾಯಿ ಸರ್ಕಾರವು ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಲು ವಿಫಲವಾದ ಹಿನ್ನೆಲೆಯಲ್ಲಿ ಬಿಜೆಪಿ ವಿಶ್ವಾಸ ದ್ರೋಹಿ ಪಕ್ಷ ಎಂದು ಸುಪ್ರೀಂ ಹೇಳಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲ, ಡಿಕೆಶಿ ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವಿಶ್ವಾಸ ದ್ರೋಹಿ ಪಕ್ಷ ಎಂದು ಸುಪ್ರೀಂ ಕೋರ್ಟ್ ತಿಳಿಸಿದ್ದು, ಚುನಾವಣಾ ವೇಳೆ ಜೇನುಗೂಡಿಗೆ ಕೈ ಹಾಕಿ ಮೋಸ ಮಾಡಿದ್ದಾರೆ. ನಿಮಗೆ ಬದ್ಧತೆ ಇದೀಯಾ, ರಾಜ್ಯದ ಜನತೆಗೆ, ಸುಳ್ಳು, ಮೋಸ ಮಾಡಿಕೊಂಡು ಕಾಲ ಕಳೆಯುತ್ತಿದ್ದೀರಿ ಎಂದು ಬಿಜೆಪಿ ವಿರುದ್ಧ ಡಿಕೆಶಿ ಕಿಡಿಕಾರಿದರು.
ಮೀಸಲಾತಿ ವಿಚಾರವಾಗಿ ಮಾತನಾಡಿದ ಅವರು, ಜನಸಂಖ್ಯೆ ಆಧಾರದ ಮೇಲೆ ಅಲ್ಪಸಂಖ್ಯಾತರು ಮೀಸಲಾತಿಯನ್ನು ತೆಗೆದು ಲಿಂಗಾಯತರು, ಒಕ್ಕಲಿಗರಿಗೆ ನೀಡಿದ್ದಾರೆ. ನೀವು ಕೊಟ್ಟಿರುವ ಮೀಸಲಾತಿಯನ್ನು sವಿಥ್ ಡ್ರಾ ಆಗಿದೆ. ಲಿಂಗಾಯಿತರ, ಒಕ್ಕಲಿಗರು ಏನು ಭಿಕ್ಷÄಕರ? ಎಂದು ವಾಗ್ದಾಳಿ ನಡೆಸಿದ್ದಾರೆ.
ಮುಂದುವರೆದು ಮಾತನಾಡಿದ ಅವರು, 13ರಂದು ಬಿಜೆಪಿ ಶವ ಆಚರಿಸಲಿದ್ದೇವೆ. ನಿಮ್ಮ ಡಬ್ಬಲ್ ಇಂಜಿನ್ ಸರ್ಕಾರ ಕೆಟ್ಟೋಗಿದೆ, ಡ್ಯಾಂ ಹೊಡೆದಾಗಿದೆ ಈ ಚುನಾವಣೆಯಲ್ಲಿ ಬಿಜೆಪಿ 40% ನಂತೆ 40 ಸೀಟ್ ಗೆಲ್ಲಲಿದೆ. ಬೊಮ್ಮಾಯಿ, ಮೋದಿ, ಅಮಿತ್ ಶಾ ಯಡಿಯೂರಪ್ಪನವರು ಜನರಿ ಮೋಸಮಾಡಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬರುತ್ತೆ ರಕ್ತದಲ್ಲಿ ಬರೆದುಕೊಡ್ತೀನಿ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಡಿಕೆಶಿ ನಾನು ನಿಮಗೆ ರಕ್ತದಲ್ಲಿ ಬರೆದುಕೊಡ್ತೀನಿ. ನಿಮ್ಮ ವಿಶ್ವಾಸ ದ್ರೋಹಕ್ಕೆ ಕಾಂಗ್ರೆಸ್ ಸರ್ಕಾರ ಈ ಚುನಾವಣೆಯಲ್ಲಿ ಗೆದ್ದು ಅಧಿಕಾರ ನಡೆಸಲಿದೆ. ನೀವು 40 ಸೀಟಿಗೆ ನಿಲ್ಲುತ್ತೀರಿ ನಾವು 150 ಸೀಟು ಗೆದ್ದೆ ಗೆಲ್ತೇವೆ. ನಾನು ಇದನ್ನು ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
ಮುಸ್ಲಿಂಮರ ಶೇಕಡಾ ನಾಲ್ಕು ಮೀಸಲಾತಿಯನ್ನು ರದ್ದು ಮಾಡಿದ ಬಿಜೆಪಿ ಸರ್ಕಾರ ಅದನ್ನು ಸುಪ್ರೀಂಕೋರ್ಟ್ ಮುಂದೆ ಸಮರ್ಥಿಸಿಕೊಳ್ಳಲು ವಿಫಲವಾಗಿದೆ. ಹೀಗಾಗಿ ರಾಜ್ಯ ಸರ್ಕಾರದ ಮೀಸಲಾತಿ ಬರೀ ಲಾಲಿಪಾಪ್ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು.
ಅವರು ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮುಸ್ಲಿಂ ಮೀಸಲಾತಿ ರದ್ದು ಮಾಡಿದ ಆದೇಶವನ್ನೇ ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಇದರಿಂದ ಮೀಸಲಾತಿ ಹೆಸರಲ್ಲಿ ಸುಳ್ಳು ಹೇಳುತ್ತಿರುವ ಬಿಜೆಪಿಗೆ ಹಿನ್ನೆಡೆ ಆಗಿದೆ. ಇದು ಡಬ್ಬಲ್ ಇಂಜಿನ್ ಸರ್ಕಾರದ ಮೋಸ. ಲಿಂಗಾಯತ, ಒಕ್ಕಲಿಗೆ, ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಸರಿನಲ್ಲಿ ಮೋಸ ಮಾಡಿದೆ ಎಂದರು.
ಮೀಸಲಾತಿ ಬದಲಾವಣೆ/ಪರಿಷ್ಕರಣೆಯನ್ನು ಸಮರ್ಥಿಸಿಕೊಳ್ಳಲಾಗದ ಬಿಜೆಪಿ ಲಿಂಗಾಯತ, ಒಕ್ಕಲಿಗ, ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ವಂಚನೆ ಮಾಡಿದ್ದು ಯಾಕೆ? ಸುಪ್ರೀಂಕೋರ್ಟ್ ನಲ್ಲಿ ಯಾಕೆ ಮೀಸಲಾತಿಯನ್ನು ಸಮರ್ಥಿಸಿಕೊಳ್ಳಲಿಲ್ಲ. ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಮೀಸಲಾತಿ ಕೇಸ್ ಗೆ ಸಂಬಂಧಪಟ್ಟಂತೆ ಯಾಕೆ ಅಫಿಡವಿಟ್ ಸಲ್ಲಿಸಲಿಲ್ಲ?
ಎಸ್ ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಶಿಫಾರಸನ್ನು ಮೋದಿ ಸರ್ಕಾರ ಮಾರ್ಚ್ 14ರಂದು ತಿರಸ್ಕರಿಸಿದ್ದು ಯಾಕೆ? ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಯಾಕೆ ಸೇರಿಸಲಿಲ್ಲ? ಎಸ್ಸಿ, ಎಸ್ಟಿ. ಒಬಿಸಿ, ಲಿಂಗಾಯತ, ಒಕ್ಕಲಿಗ ಮತ್ತು ಇತರೆ ಸಮುದಾಯದ ಮೀಸಲಾತಿ ಬೇಡಿಕೆ ಈಡೇರಿಸಲು ಶೇ.50ರಷ್ಟು ಮೀಸಲಾತಿ ಮಿತಿಯನ್ನು ಯಾಕೆ ತೆಗೆದುಹಾಕಲಿಲ್ಲ? ಅಲ್ಪಸಂಖ್ಯಾತರ ಮೀಸಲಾತಿಯನ್ನು ಅನ್ಯಾಯವಾಗಿ ಟಾರ್ಗೆಟ್ ಮಾಡಿದ್ದು ಯಾಕೆ? ಬಸವರಾಜ ಬೊಮ್ಮಾಯಿ ಸರ್ಕಾರ ತಮ್ಮದೇ ಸರ್ಕಾರದ ಹೇಳಿಕೆಯನ್ನು ಸುಪ್ರೀಂಕೋರ್ಟ್ ನಲ್ಲಿ ಯಾಕೆ ಸಮರ್ಥಿಸಿಕೊಳ್ಳಲಿಲ್ಲ? ಮೀಸಲಾತಿ ವಿಚಾರದಲ್ಲಿ ಬಿಜೆಪಿ ಉಂಟು ಮಾಡಿದ ಗೊಂದಲಕ್ಕಾಗಿ ಮೋದಿ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತಾರಾ? ಎಂಬ ಒಂಭತ್ತು ಪ್ರಶ್ನೆಯನ್ನು ಬಿಜೆಪಿ ಮುಂದಿರಿಸಿದರು.
ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಾ?: ಡಿಕೆಶಿ
