ಮೈಸೂರು: ಚಿಕ್ಕಮಗಳೂರಿನಲ್ಲಿ ಪೊಲೀಸರು ಯುವ ವಕೀಲರೊಬ್ಬರ ಮೇಲೆ ನಡೆಸಿದ ಅಮಾನುಷ ಹಲ್ಲೆಯನ್ನು ಖಂಡಿಸಿದ್ದಲ್ಲದೆ, ವಕೀಲರ ಸಂರಕ್ಷಣಾ ಕಾಯಿದೆ ಜಾರಿಗೆ ತರುವಂತೆ ಮೈಸೂರಿನಲ್ಲಿ ನೂರಾರು ವಕೀಲರು ಪ್ರತಿಭಟನೆ ನಡೆಸಿದರು.
ಶುಕ್ರವಾರ ಬೆಳಿಗ್ಗೆ ನ್ಯಾಯಾಲಯದ ಕಲಾಪವನ್ನು ಬಹಿಷ್ಕರಿಸಿ ಬೀದಿಗಳಿದ ನೂರಾರು ವಕೀಲರು ನ್ಯಾಯಾಲಯದ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಂ.ಮಹದೇವಸ್ವಾಮಿ ಮಾತನಾಡಿ, ರಾಜ್ಯದಲ್ಲಿ ವಕೀಲರ ಮೇಲೆ ನಿರಂತರವಾಗಿ ಹಲ್ಲೆಗಳು ನಡೆಯುತ್ತಿದ್ದು, ವಕೀಲರುಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಪೊಲೀಸರು ಅಮಾನುಷವಾಗಿ ಹಲ್ಲೆ ನಡೆಸಿ ಅವಮಾನಿಸಿದ್ದಾರೆ. ಹಲ್ಲೆ ನಡೆಸಿದ ಪೊಲೀಸರನ್ನು ಸರ್ಕಾರ ಕೂಡಲೇ ಸೇವೆಯಿಂದ ವಜಾ ಮಾಡಬೇಕು. ಆಗಸ್ಟ್ ತಿಂಗಳಲ್ಲಿ ಮೈಸೂರಿನಲ್ಲಿ ನಡೆದ ವಕೀಲರ ಸಮ್ಮೇಳನದಲ್ಲಿ ಮುಖ್ಯಮಂತ್ರಿಯವರು ವಕೀಲರಿಗೆ ಭರವಸೆ ನೀಡಿದಂತೆ ಪ್ರಸಕ್ತ ಅಧಿವೇಶನದಲ್ಲಿ ವಕೀಲರ ಸಂರಕ್ಷಣಾ ಕಾಯಿದೆಯನ್ನು ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದರು.
ಚಿಕ್ಕಮಗಳೂರಿನ ವಕೀಲರ ಮೇಲೆ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಭಾರತ ದಂಡ ಸಂಹಿತೆ ಕಲಂ,೫೦೬, ೩೪೧, ೩೦೭, ೩೨೪, ೩೨೬, ೫೦೪ ಮತ್ತು ೧೪೯ ರಡಿ ಪ್ರಕರಣ ದಾಖಲಾಗಿದ್ದರೂ ಸಂಬಂಧಪಟ್ಟ ವ್ಯಕ್ತಿಗಳನ್ನು ಆ ದಿನ ಬಂಧಿಸಿಲ್ಲ. ಜತೆಗೆ ೨ನೇ
ಆರೋಪಿುಂನ್ನು ಬಂಧಿಸಿ ಠಾಣೆುಂಲ್ಲೇ ಜಾಮೀನಿನ ಮೇಲೆ ಬಿಡುಗಡೆ ವಾಡಿದ್ದಾರೆ. ಕಲಂ
೩೦೭ ರಲ್ಲಿ ದಾಖಲಾದ ಪ್ರಕರಣಕ್ಕೆ ನ್ಯಾಾಂಲುಂದ ಆದೇಶವಿಲ್ಲದೆ ಠಾಣಾ ಜಾಮೀನಿನ ಮೇಲೆ ಬಿಟ್ಟಿರುವುದು ಕಾನೂನು ಬಾಹಿರ ಅಲ್ಲದೇ ಪೊಲೀಸರು, ವಕೀಲರನ್ನು ಅವಾಚ್ಯಶಬ್ದಗಳಿಂದ ನಿಂದಿಸಿ, ತೊಡೆತಟ್ಟಿ ಅವಹೇಳನ ಮಾಡಿದ್ದಾರೆ. ಇದರ ವಿರುದ್ಧವೂ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.
ಚಿಕ್ಕಮಗಳೂರು ಘಟನೆ ಸಂಬಂಧ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಮಂಗಳವಾರ ತೀರ್ಪು ಹೊರಬೀಳುವ ಸಾಧ್ಯತೆ ಇದ್ದು, ಬಳಿಕ ಮುಂದಿನ ಹೋರಾಟ ರೂಪಿಸುವುದಾಗಿ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಮೈಸೂರು ವಕೀಲರ ಸಂಘದ ಉಪಾಧ್ಯಕ್ಷ ಪುಟ್ಟ ಸಿದ್ದೇಗೌಡ, ಕಾರ್ಯದರ್ಶಿ ಎಸ್.ಉಮೇಶ್, ಖಜಾಂಚಿ ಎಚ್.ಎಸ್.ಮಹದೇವಸ್ವಾಮಿ, ಜಂಟಿ ಕಾರ್ಯದರ್ಶಿ ಜಿ.ಎಂ.ನಾಗೇಶ್, ಮಹಿಳಾ ಕಾರ್ಯದರ್ಶಿ ಬಿ.ಎಸ್.ಭಾಗ್ಯಮ್ಮ ಸೇರಿದಂತೆ ನೂರಾರು ವಕೀಲರು ಭಾಗವಹಿಸಿದ್ದರು.