ಬೆಂಗಳೂರು: ಕಾಲೇಜು ಫೆಸ್ಟ್ ವೇಳೆ ಎರಡು ಗುಂಪಿನ ನಡುವೆ ನಡೆದ ಗಲಾಟೆಯಲ್ಲಿ ವಿದ್ಯಾರ್ಥಿಯೊಬ್ಬ ಭೀಕರವಾಗಿ ಕೊಲೆಯಾಗಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ.
ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (೨೨) ಕೊಲೆಯಾದ ವಿದ್ಯಾರ್ಥಿ. ಈತ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿAಗ್ ಓದುತ್ತಿದ್ದ. ಕಾಲೇಜಿನಲ್ಲಿ ಫೆಸ್ಟ್ (ಸಾಂಸ್ಕöÈತಿಕ ಉತ್ಸವ) ನಡೆಯುತ್ತಿದ್ದ ವೇಳೆ ಶುಕ್ರವಾರ ರಾತ್ರಿ ವಿದ್ಯಾರ್ಥಿಗಳ ಎರಡು ಗುಂಪಿನ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮತ್ತೊಂದು ಗುಂಪು ಭಾಸ್ಕರ್ ಮೇಲೆ ದಾಳಿ ಮಾಡಿ ಚಾಕುವಿನಿಂದ ಇರಿದಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸದ್ಯ ವಿದ್ಯಾರ್ಥಿ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಬಾಗಲೂರು ಪೊಲೀಸರು ಕಾಲೇಜು ಸಿಸಿಟಿವಿ ದೃಶ್ಯ ಪರಿಶೀಲಿಸಿದ ನಂತರ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ವಿದ್ಯಾರ್ಥಿಯ ಭೀಕರ ಕೊಲೆ
