ಮೈಸೂರು: ಪ್ರಜ್ಞಾವಂತ ನಾಗರಿಕ ವೇದಿಕೆ ಹಾಗೂ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಬಟ್ಟೆ ಬ್ಯಾಗ್ ವಿತರಿಸುವ ಮೂಲಕ ಪ್ಲಾಸ್ಟಿಕ್ ನಿಷೇಧ ಜಾಗೃತಿ ಅಭಿಯಾನ ವನ್ನು ಜೂನ್ 5 ರಂದು ಬೆಳಗ್ಗೆ 9:30 ಗಂಟೆಗೆ ದೇವರಾಜ ಮೊಹಲ್ಲಾದ ಮಾರ್ಕೆಟ್ ಮುಂಭಾಗ ಜಾಗೃತಿ ಅಭಿಯಾನ ಆಯೋಜಿಸಲಾಗಿದೆ ಎಂದು ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷರಾದ ಕಡಕೋಳ ಜಗದೀಶ್ ತಿಳಿಸಿದ್ದಾರೆ,
ಮುಖ್ಯ ಅತಿಥಿಗಳಾಗಿ ಶಾಸಕರಾದ ಟಿಎಸ್ ಶ್ರೀವತ್ಸ, ಮಹಾಪೌರರಾದ ಶಿವಕುಮಾರ್, ಬಿಜೆಪಿ ಮುಖಂಡರಾದ ಕೌಟಿಲ್ಯ ರಘು, ಮೂಡ ಮಾಜಿ ಅಧ್ಯಕ್ಷರಾದ ಯಶಸ್ವಿ ಸೋಮಶೇಖರ್ ,ನಗರ ಪಾಲಿಕೆ ಆರೋಗ್ಯ ಅಧಿಕಾರಿ ಡಾಕ್ಟರ್ ನಾಗರಾಜ್, ನಗರಪಾಲಿಕ ಸದಸ್ಯರಾದ ಪ್ರಮೀಳಾ ಭರತ್, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್, ಹಿರಿಯ ಸಮಾಜಸೇವಕರಾದ ಕೆ ರಘುರಾಮ್ ವಾಜಪೇಯಿ, ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್, ಇನ್ನಿತರರು ಭಾಗವಹಿಸಲಿದ್ದಾರೆ
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ಲಾಸ್ಟಿಕ್ ನಿಷೇಧ ಜಾಗೃತಿ ಅಭಿಯಾನ
