ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಶಿಗ್ಗಾವಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಪಟ್ಟಣದ ದ್ಯಾಮವ್ವ ಗುಡಿಗೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಕಿತ್ತೂರು ರಾಣಿ ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ತಹಶೀಲ್ದಾರ್ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಚಿವ ಸಿ.ಸಿ.ಪಾಟೀಲ, ಸಂಸದ ಶಿವಕುಮಾರ ಉದಾಸಿ ಸಾಥ್ ನೀಡಿದರು. ಶನಿವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಏ.19ಕ್ಕೆ ಪಕ್ಷದ ಕಾರ್ಯಕರ್ತರು, ಬೆಂಬಲಿಗರೊಂದಿಗೆ ಅದ್ಧೂರಿಯಾಗಿ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಲಿದ್ದಾರೆ.