ಮೈಸೂರು: ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿ ವತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವದ ಪ್ರಯುಕ್ತ ಭಕ್ತಾದಿಗಳಿಗೆ ತುಳಸಿ ಗಿಡ ವಿತರಣೆ ಕಾರ್ಯಕ್ರಮವನ್ನು ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣದಾಮದಲ್ಲಿ ಸೆಪ್ಟೆಂಬರ್ 1 ರಂದು ಬೆಳಗ್ಗೆ 10:30 ಕ್ಕೆ ಆಯೋಜಿಸಲಾಗಿದೆ ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್ ತಿಳಿಸಿದ್ದಾರೆ
ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ಪರಮಪೂಜ್ಯ ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀ ಪಾದಂಗಳರವರ , ಶಾಸಕರಾದ ಟಿ ಎಸ್ ಶ್ರೀವತ್ಸ, ಮೈಸೂರ್ ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್, ಹಿರಿಯ ಸಮಾಜಸೇವಕರದ ಕೆ ರಘುರಾಮ್ ವಾಜಪೇಯಿ, ಕೃಷ್ಣ ಮಿತ್ರ ಮಂಡಳಿಯ ಅಧ್ಯಕ್ಷರಾದ ರಮೇಶ್, ಸುಬ್ರಮಣ್ಯ ತಂತ್ರಿ, ರವಿಶಾಸ್ತ್ರಿ, ಎಂ ಕೆ ಪುರಾಣಿಕ್, ಕಾಂಗ್ರೆಸ್ ಮುಖಂಡರಾದ ಎನ್ ಎಂ ನವೀನ್ ಕುಮಾರ್, ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ