ಬೆಂಗಳೂರು: ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಹಸ್ರಾರು ಗಿಡಗಳನ್ನು ನೆಟ್ಟು, ಅವುಗಳನ್ನು ತಾಯಿಯಂತೆ ಪೊರೆದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಸ್ವರ್ಥ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ ತಿಮ್ಮಕ್ಕನವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ರ್ಜೆ ಸ್ಥಾನಮಾನವನ್ನು ಮುಂದುವರೆಸಿ ಆದೇಶಿಸಿರುವುದಾಗಿ ತಿಳಿಸಿದ್ದಾರೆ.