ಮೈಸೂರು:- ಮುಡಾದಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಇದೀಗ ತನಿಖೆ ನಡೆಯುತ್ತಿದೆ. ಕೂಲಂಕುಷವಾಗಿ ತನಿಖೆ ನಡೆಯಲಿದೆ. ಈ ಹಂತದಲ್ಲಿ ಹೆಚ್ಚು ಮಾತನಾಡುವುದಿಲ್ಲ ಎಂದು ಮುಡಾ ಅಧ್ಯಕ್ಷ ಕೆ.ಮರೀಗೌಡ ಹೇಳಿದರು.ಇಂದು ಜಲದರ್ಶಿನಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಶಾಸಕ ಕೆ.ಹರೀಶ್ಗೌಡ ಹಾಗೂ ಮುಡಾ ಅಧ್ಯಕ್ಷ ಮರಿಗೌಡ ಮಾತನಾಡಿ, 50-50 ಅನುಪಾತದಲ್ಲಿ ಸಿಎಂ ಕುಟುಂಬ ನಿಯಮಬಾಹಿರ ಸೈಟ್ ಪಡೆದ ಆರೋಪ ವಿಚಾರದಲ್ಲಿ ಸಿಎಂ ಹಾಗೂ ಅವರ ಕುಟುಂಬ ಕಾನೂನಾತ್ಮಕವಾಗಿ ಇದೆ. ಇಲ್ಲಿ ಮುಡಾ ಸಿಎಂ ಕುಟುಂಬಕ್ಕೆ 75 ಸಾವಿರ ಚದರ ಅಡಿ ಜಾಗ ಕೊಡಬೇಕಿತ್ತು. ಆದರೂ ಕೊಟ್ಟಿರುವ 38 ಸಾವಿರ ಚದ ಅಡಿಗೆ ನಮ್ಮ ನಾಯಕರ ತೃಪ್ತಿ ಪಟ್ಟುಕೊಂಡಿದ್ದಾರೆ. ಅಂತಹವರ ಮೇಲೆ ಸುಳ್ಳು ಆರೋಪ ಮಾಡೋದು ಸರಿಯಲ್ಲ ಎಂದರು.ಸಿಎಂ ಸಿದ್ದರಾಮಯ್ಯ ಆಪ್ತ ಹಿನ್ಕಲ್ ಪಾಪಣ್ಣಗೆ ಮುಡಾ ಬದಲಿ ನಿವೇಶನ ಹಂಚಿಕೆ ವಿಚಾರದಲ್ಲಿ ನಿವೇಶನ ಹಂಚಿಕೆ ತಡೆ ಹಿಡಿಯಲಾಗಿದೆ. ಈ ಮೊದಲು ನ್ಯಾಯಾಲಯದ ಆದೇಶದಂತೆ ಬದಲಿ ನಿವೇಶನ ಹಂಚಿಕೆ ಆಗಿತ್ತು.ಹಂಚಿಕೆ ವೇಳೆ ತಪ್ಪಾಗಿದೆ ಎಂದು ಗೊತ್ತಾಗಿದೆ. ಈಗ ಅದನ್ನೂ ತಡೆ ಹಿಡಿಯಲಾಗಿದೆ. ಹಿನ್ಕಲ್ ಸರ್ವೆ ನಂ. 211ರಲ್ಲಿ 3.05 ಗುಂಟೆ ಜಮೀನು ಸಂಬಂಧಿಸಿದ ಪ್ರಕರಣ. 1981ರಲ್ಲಿ ಸ್ವಾಧೀನ ಪಡೆದು, 1984ರಲ್ಲಿ ಕೈ ಬಿಡಲಾಗಿತ್ತು.ಅದಕ್ಕೆ 2024ರ ಜೂನ್12 ರಂದು ಪರಿಹಾರ ಕೊಟ್ಟಿದ್ದರು. 36,753 ಚದರ ಅಡಿ ಪರಿಹಾರ ಕೊಡಲಾಗಿತ್ತು. ಇದಕ್ಕಾಗಿ ವಿಜಯನಗರದ ವಿವಿಧ ಬಡಾವಣೆಗಳಲ್ಲಿ 20 ನಿವೇಶನ ಕೊಟ್ಟು ಆದೇಶ ಮಾಡಲಾಗಿತ್ತು. ಈಗ ಆ ದೇಶಕ್ಕೂ ತಡೆ ಬಿದ್ದಿದೆ ಎಂದು ಮಾಹಿತಿ ನೀಡಿದರು.ಸುದ್ದಿಗೋಷ್ಠಿಯಲ್ಲಿ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಎಂಎಲ್ಸಿ ಡಾ.ಡಿ ತಿಮ್ಮಯ್ಯ ಸೇರಿದಂತೆ ಹಲವರು ಭಾಗಿ.