ಮೈಸೂರು:- ಸಚಿವ ಸೋಮಣ್ಣ ವರುಣಾ ಹಾಗೂ ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ಹಿನ್ನಡೆಯಲ್ಲಿದ್ದಾರೆ.
ವರುಣಾದಲ್ಲಿ ಕಾಂಗ್ರೆಸ್ನಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಚಾಮರಾಜನಗರದಲ್ಲಿ ಪುಟ್ಟರಂಗಶೆಟ್ಟಿ ಕಾಂಗ್ರೆಸ್ನಿಂದ ಎದುರಾಳಿಯಾಗಿದ್ದಾರೆ.
ಹಿಂದಿನ ಚುನಾವಣೆಯಲ್ಲಿ ಗೋವಿಂದರಾಜನಗರದಿಂದ ಸ್ಪರ್ಧಿಸಿದ್ದ ಸೋಮಣ್ಣ ಗೆಲುವು ಸಾಧಿಸಿದ್ದರು. ಈ ಚುನಾವಣೆಯಲ್ಲಿ ಹೈಕಮಾಂಡ್ ನಿರ್ಧಾರದಂತೆ ಕ್ಷೇತ್ರವನ್ನು ಬದಲಾಯಿಸಿ ಎರಡು ಕಡೆಗಳಿಂದ ಸ್ಪರ್ಧಿಸಿದ್ದರು.
ನಾಡದೇವತೆ ಮೊರೆ ಹೋದ ಸೋಮಣ್ಣ
ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭಕ್ಕೂ ಮುನ್ನ ಬೆಳ್ಳಂಬೆಳಗ್ಗೆ ಚಾಮರಾಜನಗರ ಹಾಗೂ ವರುಣ ಕ್ಷೇತ್ರದ ಅಭ್ಯರ್ಥಿ ವಿ. ಸೋಮಣ್ಣ ನಾಡದೇವತೆ ಮೊರೆ ಹೋಗಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸೋಮಣ್ಣ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಿಯ ಮೊದಲ ಪೂಜೆ ಕಾರ್ಯದಲ್ಲೇ ಸೋಮಣ್ಣ ಭಾಗಿಯಾಗಿದ್ದಾರೆ.
ವರುಣ ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿದ್ದು, ಚಾಮರಾಜನಗರದ ಜೊತೆಗೆ ವರುಣ ಕ್ಷೇತ್ರವನ್ನೂ ಸೋಮಣ್ಣ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಇದೀಗ ಮತ ಎಣಿಕೆ ಪ್ರಕ್ರಿಯೆಗೂ ಮುನ್ನ ನಾಡದೇವತೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ.