ಮೈಸೂರು: ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಅಂಬ್ಯಲೆನ್ಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರುಕಲಾದ ಘಟನೆ ಮೈಸೂರಿನಲ್ಲಿ ನಡೆದಿದೆ
ಮೈಸೂರಿನ ದೇವರಾಜ ಪೊಲೀಸ್ ಠಾಣೆ ವ್ಯಾಪ್ತಿಯ ದಾಸಪ್ಪ ವೃತ್ತದ ಬಳಿ ಈ ಘಟನೆ ನಡೆದಿದ್ದು, ದೇವರಾಜ ಸಂಚಾರ ಠಾಣೆ ಪೊಲೀಸರ ಸಮಯಪ್ರಜ್ಞೆಯಿಂದಾಗಿ ಹೆಚ್ಚಿನ ಅನಾಹುತ ತಪ್ಪಿದೆ. 108 ತುರ್ತುವಾಹನವನ್ನು ದಾಸಪ್ಪ ವೃತ್ತದ ಬಳಿ ನಿಲ್ಲಿಸಲಾಗಿತ್ತು. ಇಂಜಿನ್ ಹೆಚ್ಚು ಬಿಸಿಯಾಗಿದ್ದ ಹಿನ್ನೆಲೆಯಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ.
ಈ ಸುದ್ದಿ ತಿಳಿಯುತ್ತಿದ್ದಂತೆ ದೇವರಾಜ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ.
ಈ ವೇಳೆ ಇನ್ಸ್ಪೆಕ್ಟರ್ ಮಮತಾರವರ ಸಮಯಪ್ರಜ್ಞೆ ಮೆರೆದಿದ್ದಾರೆ. ಬೆಂಕಿ ಕಾಣಿಸಿಕೊಂಡ ತುರ್ತು ವಾಹನದಲ್ಲಿದ್ದ ಆಕ್ಸಿಜನ್ ಸಿಲಿಂಡರನ್ನು ಹೊರಗೆ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಲ್ಲದಿದ್ದಲ್ಲಿ ಘಟನೆ ನಡೆದ ಕೆಲವೇ ಮೀಟರ್ ಗಳ ಅಂತರದಲ್ಲಿರುವ ಪೆಟ್ರೋಲ್ ಬಂಕ್ ಗೂ ಹಾನಿಯಾಗುವ ಸಾಧ್ಯತೆಯೂ ಇತ್ತು. ಈ ನಡುವೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂಬಂಧ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂಬ್ಯಲೆನ್ಸ್ ನಲ್ಲಿ ಬೆಂಕಿ: ತಪ್ಪಿದ ಬಾರಿ ಅನಾಹುತ
