ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮೇಟಗಳ್ಳಿಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಆಸ್ಪತ್ರೆಯ ವಾರ್ಡ್ ಗಳಿಗೆ ಭೇಟಿ ನೀಡಿ ರೋಗಿಗಳ ಯೋಗ ಕ್ಷೇಮ ವಿಚಾರಿಸಿದರು. ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿ ಸ್ವಚ್ಛತೆಯನ್ನು ಕಾಪಾಡಿ ಕೊಂಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿಕಲ ಚೇತನರಿಗೆ ನೀಡಿರುವ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದರು.
ನಂತರ ICU ವಾರ್ಡ್ ಗೆ ಭೇಟಿ ನೀಡಿ ರೋಗಿಗಳ ಸ್ಥಿತಿಗತಿಗಳ ಮಾಹಿತಿ ಪಡೆದುಕೊಂಡರು. ನಂತರ ಹೆರಿಗೆ ವಾರ್ಡ್ ಗೆ ಭೇಟಿ ನೀಡಿ ತಾಯಿ ಮಗುವಿನ ಆರೋಗ್ಯ ವಿಚಾರಿಸಿದರು. ನಾರ್ಮಲ್ ಹೆರಿಗೆಗಳನ್ನು ಮಾಡಿಸಬೇಕು. ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಸಿಜೇರಿಯನ್ ಮಾಡಬೇಕು ಎಂದು ಸೂಚಿಸಿದ ಅವರು ಔಷಧಿಗಳಿಗೆ ಹೊರಗೆ ಚೀಟಿ ಬರೆದು ನೀಡಬಾರದು. ಸಕಾಲದಲ್ಲಿ ರೋಗಿಗಳಿಗೆ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದರು.