ಚಿಕ್ಕಮಗಳೂರು: ಗೃಹಲಕ್ಷ್ಮಿ ಯೋಜನೆ ಅನುಷ್ಠಾನದಲ್ಲಿ ಕೆಲ ಬದಲಾವಣೆ ಮಾಡಲಾಗುತ್ತಿದ್ದು, ಇದರಿಂದ ಅರ್ಜಿ ಸಲ್ಲಿಕೆಗೆ ವಿಳಂಬವಾಗುತ್ತಿದೆ. ಆದರೆ, ಆಗಸ್ಟ್ 17 ಅಥವಾ 18ರಂದು ಫಲಾನುಭವಿಗಳ ಖಾತೆಗೆ ಹಣ ಸಂದಾಯ ಆಗುವುದರಲ್ಲಿ ಬದಲಾವಣೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು.
ಕೊಪ್ಪ ತಾಲೂಕಿನ ಗೌರಿಗದ್ದೆ ಆಶ್ರಮದಕ್ಕೆ ಭೇಟಿ ನೀಡಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. ಗೃಹಲಕ್ಷ್ಮಿ ಯೋಜನೆ ಜನರಿಗೆ ಸುಲಭವಾಗಿ ಸಿಗಬೇಕು. ಆದ್ದರಿಂದ ಕೆಲವು ಬದಲಾವಣೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.