ಮೈಸೂರು:- ವೀರನಹೊಸಳ್ಳಿಯಿಂದ ಇಂದು ಹೊರಟ ಗಜಪಡೆ ಮೈಸೂರಿನ ಅರಭ್ಯಭವನಕ್ಕೆ ತಲುಪಿ ವಿಶ್ರಾಂತಿ ಪಡೆಯುತ್ತದೆ. ಆಗಸ್ಟ್ 21 ರಿಂದ 23ರ ವರೆಗೆ ಅಂದ್ರೆ 2 ದಿನಗಳ ಕಾಲ 9 ಆನೆಗಳು ಮೈಸೂರಿನ ಅರಣ್ಯ ಭವನದಲ್ಲಿ ವಾಸ್ತವ್ಯ ಹೊಡಲಿವೆ. ಆ.23ರಂದು ಅರಮನೆ ಅಂಗಳ ಪ್ರವೇಶಿಸಲಿವೆ. ಈ ಎಲ್ಲಾ ಕಾರ್ಯಕ್ರಮಗಳಿಗಾಗಿ ಜಿಲ್ಲಾಡಳಿತ, ಅರಣ್ಯ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.
ಈ ಬಾರಿ ನಾಡ ಹಬ್ಬ ದಸರಾದಲ್ಲಿ ಒಟ್ಟು 14 ಆನೆಗಳು ಭಾಗವಹಿಸಲಿವೆ. ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಹಾಗೂ 2ನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ. ಅಲ್ಲದೆ ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಆಯ್ಕೆ ಮಾಡಲಾಗಿದ್ದು, ಅಗತ್ಯವಿದ್ದರೆ ಮೀಸಲು ಆನೆಗಳನ್ನ ಬಳಸಿಕೊಳ್ಳಲು ಇಲಾಖೆ ತೀರ್ಮಾನಿಸಿದೆ.
ಅರಮನೆ ಪ್ರವೇಶಿಸುವ ಆನೆಗಳ ವಿವರ:
ಅಭಿಮನ್ಯು (58), ಭೀಮ (24), ಗೋಪಿ (41), ಧನಂಜಯ (43), ಕಂಜನ್ (25), ರೋಹಿಣಿ (22), ಲಕ್ಷ್ಮೀ (53), ವರಲಕ್ಷ್ಮಿ (67), ಏಕಲವ್ಯ (38) ಆನೆಗಳು ಮೊದಲ ಗಜಪಯಣದಲ್ಲಿ ಮೈಸೂರಿಗೆ ಬರಲಿವೆ.