ಮೈಸೂರು: ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ಸರ್ಕಾರಿ ಶಾಲೆ ಮಕ್ಕಳಿಗೆ ಇನ್ಫೋಸಿಸ್ ಸಂಸ್ಥೆ ವತಿಯಿಂದ ಪುಸ್ತಕ ವಿತರಣೆ ಮಾಡಲಾಯಿತು.
ದೇಶದ ಪ್ರತಿಷ್ಠಿತ ಕಂಪನಿಯಾದ ಇನ್ಫೋಸಿಸ್ ಮೈಸೂರು ಶಾಖೆ ವತಿಯಿಂದ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜಯಪುರ, ಸರ್ಕಾರಿ ಪ್ರೌಢಶಾಲೆ ಮಾರ್ಬಳ್ಳಿ ಶಾಲೆಗಳಿಗೆ ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ವಿತರಣೆ ಮಾಡಲಾಯಿತು.
ಹಾಗೂ ಮೈಸೂರು ಜಿಲ್ಲೆಯ ಜನತಾ ಐವತ್ತಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಪುಸ್ತಕಗಳನ್ನು ವಿತರಿಸಿದರು. ನ್ಫೋಸಿಸ್ ಸಂಸ್ಥೆಯು ತನ್ನದೇ ರೀತಿಯ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಾ ಬಂದಿದೆ. ಅದೇ ರೀತಿ ಸರ್ಕಾರಿ ಶಾಲೆ ಮಕ್ಕಳಿಗೆ ಶಾಲಾ ಪುಸ್ತಕಗಳನ್ನು ನೀಡುವ ಮೂಲಕ ಎಂದಿನಂತೆ ತಮ್ಮ ಸೇವಾ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಪುಸ್ತಕಗಳನ್ನು ಪಡೆದ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು
ಕಾರ್ಯಕ್ರಮದಲ್ಲಿ ಇನ್ಫೋಸಿಸ್ ಸಂಸ್ಥೆಯ ಉದ್ಯೋಗಿಗಳು ಉಪಸ್ಥಿತರಿದ್ದರು