ಬೆಂಗಳೂರು: ಇಂದು ಕರ್ನಾಟಕದ ಬೆಂಗಳೂರು, ಮಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ದೇಶದ ವಿವಿಧ ರಾಜ್ಯಗಳಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಬೆಳ್ಳಿ ದರ ಸ್ಥಿರವಾಗಿದೆ. ಚಿನ್ನದ ದರ ಏರಿಳಿತ ಸಾಮಾನ್ಯವಾಗಿದ್ದು, ಚಿನ್ನದ ಖರೀದಿಗೆ ಇದು ಸಕಾಲ.
ಇಂದು 22 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂಗೆ 5,470 ರೂ ಆಗಿದೆ. ನಿನ್ನೆಯ 5,505ಕ್ಕೆ ಹೋಲಿಸಿದರೆ ಇಂದು 35 ರೂ ಇಳಿಕೆಯಾಗಿದೆ. ಇದೇ ರೀತಿ 24 ಕ್ಯಾರೆಟ್ ಅಪರಂಜಿ ಚಿನ್ನದ ದರ ಇಂದು ಗ್ರಾಂಗೆ 5,967 ರೂ., ಆಗಿದ್ದು, ನಿನ್ನೆಯ 6,005ಕ್ಕೆ ಹೋಲಿಸಿದರೆ 38 ರೂ. ಇಳಿಕೆಯಾಗಿದೆ. ಬೆಳ್ಳಿ ದರ ಇಂದು ಸ್ಥಿರವಾಗಿದ್ದು 74.50 ರೂ ಇದೆ.
ಅಂತರರಾಷ್ಟಿçÃಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಏರಿಳಿತವಾಗಲು ಹಲವು ಅಂತರರಾಷ್ಟಿçÃಯ ಕಾರಣಗಳಿವೆ. ಹಣದುಬ್ಬರ, ಸೆಂಟ್ರಲ್ ಬ್ಯಾಂಕ್ನಲ್ಲಿ ಚಿನ್ನದ ನಿಕ್ಷೇಪಗಳು, ಬಡ್ಡಿದರಗಳಲ್ಲಿ ಹೆಚ್ಚಳ ಅಥವಾ ಇಳಿಕೆಯಂತಹ ಅಂಶಗಳು ಸಹ ಚಿನ್ನ, ಬೆಳ್ಳಿ ಬೆಲೆಯಲ್ಲಿನ ಏರಿಳಿತಗಳಿಗೆ ಕಾರಣವಾಗಿದೆ.ಕರ್ನಾಟಕದ ಬೆಂಗಳೂರು, ಮಂಗಳೂರು, ಮೈಸೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ವಿವಿಧ ನಗರಗಳಲ್ಲಿ ಇಂದು ಚಿನ್ನದ ದರದಲ್ಲಿ ಇಳಿಕೆಯಾಗಿದೆ. ಇದೇ ರೀತಿ ಹೊರರಾಜ್ಯಗಳಲ್ಲಿಯೂ ಚಿನ್ನದ ದರದಲ್ಲಿ ಇಳಿಕೆ ಕಂಡಿದೆ. ಬೆಳ್ಳಿ ದರ ಸ್ಥಿರವಾಗಿದೆ.