ಮೈಸೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಕುರಿತು ಹೇಳಿಕೆ ನೀಡಿದ ಕಾಂಗ್ರೆಸ್ ಕೆಪಿಸಿಸಿ ಮಾದ್ಯಮ ವಕ್ತಾರರಿಗೆ ಜೀವ ಬೆದರಿಕೆ ಹಾಕಿದ್ದು, ಈ ಸಂಬಂಧ ಸ್ವತಃ ಕಾಂಗ್ರೆಸ್ ಸಮಿತಿ ನಗರ ಪೊಲೀಸ್ ಆಯುಕ್ತರಿಗೆ ದೂರು ದಾಖಲಿಸಿದೆ.
ನಗರ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ದೂರನ್ನು ಕೈ ಮುಖಂಡರು ದಾಖಲಿಸಿದ್ದಾರೆ.
ಅ.26 ಮತ್ತು27 ರಂದು ಪತ್ರಿಕಾಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿರವರ ಆಧಾರ ರಹಿತ ಆರೋಪಕ್ಕೆ ಸ್ಪಷ್ಟೀಕರಣ ನೀಡಿದ್ದೇನೆ. ಕುಮಾರಸ್ವಾಮಿರವರ ಅಭಿಮಾನಿಗಳು ಮತ್ತು ಜೆಡಿಎಸ್ ಕಾರ್ಯಕರ್ತರು ನಿರಂತರವಾಗಿ ಕೆಪಿಸಿಸಿ ವಕ್ತಾರನಾದ ನನಗೆ ಬೆದರಿಕೆಗಳನ್ನು ಹಾಕುತ್ತಿದ್ದಾರೆ ಹಾಗೂ ನಮ್ಮ ಮನೆಗೆ ಮುತ್ತಿಗೆ ಹಾಕಲು ಮತ್ತು ಒಂಟಿಯಾಗಿದ್ದಾಗ ನನ್ನನ್ನು ಅಟ್ಯಾಕ್ ಮಾಡಲು ಇಂದು ಕೆಲವರು ಕಲಾಮಂದಿರದ ಮುಂದೆ ಮಾತನಾಡಿಕೊಳ್ಳುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಆದ್ದರಿಂದ ನನ್ನ ಸಂಬಂಧಿಸಿದ ದೂರವಾಣಿ ಕರೆ ಆಧಾರ ಮೇಲೆ ಸಂಬಂಧಿಸಿದವರ ವಿರುದ್ಧ ದೂರು ದಾಖಲಿಸಿಕೊಂಡು ಎಫ್ ಐಆರ್ ಮಾಡುವಂತೆ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಕೋರಿದ್ದಾರೆ. ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ಜಿಲ್ಲಾ ಮಾದ್ಯಮ ವಕ್ತಾರ ಮಹೇಶ್, ಪ್ರಚಾರ ಸಮಿತಿ ಅಧ್ಯಕ್ಷ ನಾಗೇಶ್ ಇನ್ನಿತರರು ಹಾಜರಿದ್ದರು.