ಮಂಡ್ಯ: ಏಪ್ರಿಲ್ ಮೊದಲ ವಾರದಲ್ಲಿಯೇ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇರುವುದರಿಂದ ಪಾರದರ್ಶಕವಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಹೇಳಿದರು.
ಚುನಾವಣೆ ದಿನಾಂಕ ಘೋಷಣೆ ನಂತರ ಜಿಲ್ಲೆಯಲ್ಲಿ ಯಾವುದೇ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದAತೆ ಸಾರ್ವಜನಿಕರು, ಮತದಾರರು, ರಾಜಕೀಯ ಪಕ್ಷಗಳು, ಮುಖಂಡರು, ಕಾರ್ಯಕರ್ತರು ಸಹಕರಿಸಬೇಕು. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಕಂಡು ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಏಳು ಕ್ಷೇತ್ರಗಳಿಗೆ ಚುನಾವಣೆ:
ಜಿಲ್ಲೆಯ ಮಂಡ್ಯ, ಮದ್ದೂರು, ಮಳವಳ್ಳಿ, ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್.ಪೇಟೆ ಹಾಗೂ ನಾಗಮಂಗಲ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಆದ್ದರಿಂದ ಈಗಾಗಲೇ ಕ್ಷೇತ್ರವಾರು ಏಳು ಮಂದಿ ಚುನಾವಣಾಧಿಕಾರಿಗಳು ಹಾಗೂ ಏಳು ಮಂದಿ ಸಹಾಯಕ ಚುನಾವಣಾಧಿಕಾರಿಗಳು ಸೇರಿದಂತೆ ಒಟ್ಟು 14 ಮಂದಿಯನ್ನು ನೇಮಿಸಲಾಗಿದೆ ಎಂದು ತಿಳಿಸಿದರು.
1798 ಮತಗಟ್ಟೆ ಕೇಂದ್ರಗಳು:
ಜಿಲ್ಲೆಯಾದ್ಯAತ ಒಟ್ಟು 1798 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಸೂಕ್ಷö್ಮ 24 ಹಾಗೂ ಅತಿ ಸೂಕ್ಷö್ಮ 319 ಮತಗಟ್ಟೆಗಳನ್ನು ತೆರೆಯಲಾಗಿದೆ. ಜೊತೆಗೆ ಮಹಿಳಾ ಮತದಾರರಿಗಾಗಿ ಪಿಂಕ್ ಬಣ್ಣದ ಸಖಿ ಮತಗಟ್ಟೆಯನ್ನು ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ತಲಾ 2ರಂತೆ ಕೇಂದ್ರ ತೆರೆಯಲಾಗಿದೆ. ಅಲ್ಲದೆ, 163 ವಿಶೇಷಚೇತನ ಸಿಬ್ಬಂದಿಗಳಿದ್ದು, ಒಂದು ಮತಗಟ್ಟೆ, 5 ಎಥ್ನಿಕ್ ಮತಗಟ್ಟೆ ಹಾಗೂ ಹೆಚ್ಚು ಯುವ ಮತದಾರರಿರುವ 2 ಯುವ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ವಹಿಸಲಾಗಿದೆ. ಮಳವಳ್ಳಿ ತಾಲೂಕಿನ ಬಸವನಹಳ್ಳಿ ಹಾಗೂ ಮುತ್ತತ್ತಿ ಎರಡು ಶ್ಯಾಡೋ ಮತಗಟ್ಟೆಗಳನ್ನಾಗಿ ಗುರುತಿಸಲಾಗಿದ್ದು, ಎರಡು ಮತಗಟ್ಟೆಗಳಿಗೆ ನಿರಂತರ ಸಂಪರ್ಕ ಸಾಧಿಸಲು ಕ್ರಮ ವಹಿಸಲಾಗಿದೆ ಎಂದು ವಿವರಿಸಿದರು.
ವಿದ್ಯುನ್ಮಾನ ಮತಯಂತ್ರಗಳ ಸರಬರಾಜು:
ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ವಿದ್ಯುನ್ಮಾನ ಮತಯಂತ್ರಗಳನ್ನು ಸರಬರಾಜು ಮಾಡಲಾಗಿದೆ. ಎಲ್ಲ ಮತಯಂತ್ರಗಳನ್ನು ಈಗಾಗಲೇ ಪ್ರಥಮ ಹಂತದ ಪರಿಶೀಲನೆ ನಡೆದಿದೆ. ಮತಯಂತ್ರಗಳನ್ನು ಪೊಲೀಸ್ ಭದ್ರತೆಯಲ್ಲಿ ಇರಿಸಲಾಗಿದೆ. 151 ಮತಯಂತ್ರಗಳನ್ನು ಪ್ರತೀ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಜಾಗೃತಿ ಮತ್ತು ಅರಿವು ಮೂಡಿಸಲು ಬಳಸಲಾಗುತ್ತಿದೆ. ಅಲ್ಲದೆ, ಈ ಬಾರಿ ಅತ್ಯಾಧುನಿಕ ಎಂ3 ಇವಿಎಂ ಬಳಕೆ ಮಾಡಲಾಗುತ್ತಿದೆ. ಇದರಿಂದ ಯಾವುದೇ ರೀತಿಯ ತೊಂದರೆಯಾಗದAತೆ ಕ್ರಮ ವಹಿಸಲಾಗುವುದು ಎಂದರು.
16 ನೋಡಲ್ ಅಧಿಕಾರಿಗಳ ನೇಮಕ:
ಜಿಲ್ಲೆಯಾದ್ಯಂತ 16 ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಮ್ಯಾನ್ಪವರ್ ಮ್ಯಾನೇಜ್ಮೆಂಟ್, ತರಬೇತಿ, ಸಾಮಗ್ರಿ, ಸಾರಿಗೆ, ಕಂಪ್ಯೂಟರ್, ಸ್ವೀಪ್, ಕಾನೂನು, ಆದೇಶ ಮತ್ತು ಭದ್ರತೆ, ಇವಿಎಂ, ಚುನಾವಣಾ ಖರ್ಚಿನ ಬಗ್ಗೆ ನಿಗಾವಹಿಸಲು, ಬ್ಯಾಲೆಟ್, ಅಂಚೆ ಮತದಾನ, ಮಾಧ್ಯಮ ನಿರ್ವಹಣೆ, ಸಂಪರ್ಕ, ಸಹಾಯವಾಣಿ, ವೀಕ್ಷಕರು ತಂಡಗಳನ್ನಾಗಿ ರಚಿಸಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.
ನೀತಿ ಸಂಹಿತೆ ನೋಡಲ್ ಅಧಿಕಾರಿಗಳ ನೇಮಕ:
ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸುವ ಸಂಬAಧ ಜಿಲ್ಲಾ ಮಟ್ಟದಲ್ಲಿ ಜಿಪಂ ಸಿಇಒ ಜಿಲ್ಲಾ ನೋಡಲ್ ಅಧಿಕಾರಿಯಾಗಿದ್ದು, ಇವರಿಗೆ ಏಳು ಕ್ಷೇತ್ರಗಳ ತಾಪಂ ಇಒಗಳನ್ನು ನೇಮಕ ಮಾಡಲಾಗಿದ್ದು, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದAತೆ ನಿಗಾವಹಿಸಲಿದ್ದಾರೆ. ಅಲ್ಲದೆ, ಚುನಾವಣಾ ವೆಚ್ಚಗಳ ಮೇಲೆ ನಿಗಾವಹಿಸಲು ಜಿಪಂ ಮುಖ್ಯ ಲೆಕ್ಕಾಧಿಕಾರಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ತಾಲೂಕು ಮಟ್ಟದಲ್ಲಿ ಸಹಾಯಕ ವೆಚ್ಚ ವೀಕ್ಷಕರನ್ನು ನೇಮಿಸಲಾಗಿದೆ.
127 ಸೆಕ್ಟರ್ ಅಧಿಕಾರಿಗಳು:
ಜಿಲ್ಲೆಯಾದ್ಯಂತ 127 ಸೆಕ್ಟರ್ ಅಧಿಕಾರಿಗಳು, 34 ಚೆಕ್ ಪೋಸ್ಟ್, 35 ಫ್ಲೆöÊಯಿಂಗ್ ಸ್ಕಾ÷್ವಡ್, 21 ವಿಡಿಯೋ ಸರ್ವೆಲೆನ್ಸ್ಗಳು, 14 ತೆರಿಗೆ, 21 ಸ್ಥಿರ ಜಾಗೃತಿ ದಳ ಹಾಗೂ 70 ಮಾಸ್ಟರ್ ತರಬೇತಿದಾರರನ್ನು ನಿಯೋಜಿಸಲಾಗಿದೆ. ಎಲ್ಲರಿಗೂ ಈಗಾಗಲೇ ತರಬೇತಿ ನೀಡಲಾಗಿದೆ. ಅಲ್ಲದೆ, ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಸಂಘ-ಸAಸ್ಥೆಗಳ ಮಾಲೀಕರ ಸಭೆ ನಡೆಸಿ ಮಾದರಿ ನೀತಿ ಸಂಹಿತಿ ಬಗ್ಗೆ ತಿಳುವಳಿಕೆ ನೀಡಲಾಗಿದೆ.
ಮತದಾನಕ್ಕೆ ಅಗತ್ಯ ವ್ಯವಸ್ಥೆ:
ಮತದಾನ ಮಾಡಲು ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅನಿವಾರ್ಯ ಹಾಗೂ ಅನಾರೋಗ್ಯದಿಂದ ಮತ ಕೇಂದ್ರಕ್ಕೆ ತೆರಳಿ ಮತದಾನ ಮಾಡಲು ಸಾಧ್ಯವಾಗದ ಮತದಾರರು ಅಂಚೆ ಮೂಲಕ ಮತದಾನ ಮಾಡಬಹುದಾಗಿದೆ. ಅಂಥ ಮತದಾರರು ಅರ್ಜಿ ಸಲ್ಲಿಸಿದರೆ ಮನೆಗೆ ಸುಮಾರು 10ರಿಂದ 12 ಮಂದಿ ಅಧಿಕಾರಿಗಳು ಭೇಟಿ ನೀಡಿ ಮತದಾನಕ್ಕೆ ಅವಕಾಶ ನೀಡಲಿದ್ದಾರೆ. ಅಂಚೆ ಮತದಾನ ಮಾಡಿದ ನಂತರ ಮತಗಟ್ಟೆಯಲ್ಲಿ ಮತ ಚಲಾಯಿಸಲು ಅವಕಾಶವಿರುವುದಿಲ್ಲ. ಜಿಲ್ಲೆಯಲ್ಲಿ 80 ವರ್ಷ ಮೇಲ್ಪಟ್ಟ 37411 ಮತದಾರರು ಹಾಗೂ 23 ಸಾವಿರ ವಿಶೇಷಚೇತನ ಮತದಾರರಿದ್ದಾರೆ. ಎಲ್ಲರಿಗೂ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ದೃಷ್ಟಿದೋಷ ಇರುವವರಿಗೆ ಕನ್ನಡದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಸಂಪೂರ್ಣ ದೃಷ್ಟಿದೋಷ ಇದ್ದ ವಿದ್ಯಾವಂತರು ಮತಯಂತ್ರ ಮೇಲೆ ಬ್ರೆöÊಲ್ ಲಿಪಿ ಇದ್ದು, ಅದರ ಮೂಲಕ ಮತದಾನ ಮಾಡಬಹುದಾಗಿದೆ.
ಅನಧಿಕೃತ ಫ್ಲೆಕ್ಸ್, ಬ್ಯಾನರ್ಗಳ ತೆರವು:
ಜಿಲ್ಲೆಯಾದ್ಯಂತ ನಗರ, ಪಟ್ಟಣ ಹಾಗೂ ಗ್ರಾಮೀಣ ವ್ಯಾಪ್ತಿಯಲ್ಲಿ ಪೂರ್ವಾನುಮತಿ ಪಡೆಯದೆ ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್, ಬಟಿಂಗ್ಸ್, ಫ್ಲೆಕ್ಸ್, ಪೋಸ್ಟರ್ ಮತ್ತು ಕಟೌಟ್ಸ್ಗಳನ್ನು ಮಾ.19ಕ್ಕೆ ತೆರವುಗೊಳಿಸಲಾಗಿದೆ. 120 ಗೋಡೆ ಬರಹಗಳು, 491 ಪೋಸ್ರ್ಸ್, 834 ಬ್ಯಾರ್ಸ್ ಹಾಗೂ ಇತರೆ 228 ಒಟ್ಟು 1673 ಫ್ಲೆಕ್ಸ್, ಬ್ಯಾನರ್ಗಳ ಪೈಕಿ 1200 ತೆರವುಗೊಳಿಸಲಾಗಿದೆ ಎಂದು ವಿವರಿಸಿದರು.
ಮಸ್ಟರಿಂಗ್-ಡಿಮಸ್ಟರಿAಗ್:
ವಿದ್ಯುನ್ಮಾನ ಯಂತ್ರಗಳನ್ನು ಸಂರಕ್ಷಿಸಿಡಲು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭದ್ರತಾ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ. ಮಳವಳ್ಳಿಯ ಶಾಂತಿ ಪಿಯು ಕಾಲೇಜು, ಮದ್ದೂರು ಎಚ್.ಕೆ.ವೀರಣ್ಣಗೌಡ ಪಿಯು ಕಾಲೇಜು, ಮೇಲುಕೋಟೆ ಪಿಎಸ್ಎಸ್ಕೆ ಪ್ರೌಢಶಾಲೆ, ಮಂಡ್ಯ ವಿಶ್ವವಿದ್ಯಾಲಯ(ಅಟಾನಮಸ್), ಶ್ರೀರಂಗಪಟ್ಟಣ ಸರ್ಕಾರಿ ಪಿಯು ಕಾಲೇಜು, ನಾಗಮಂಗಲ ಜೂನಿಯರ್ ಕಾಲೇಜು ಹಾಗೂ ಕೆ.ಆರ್.ಪೇಟೆಯಲ್ಲಿ ಸರ್ಕಾರಿ ಇಂಜಿನಿಯರಿAಗ್ ಕಾಲೇಜುಗಳಲ್ಲಿ ಮಸ್ಟರಿಂಗ್ ಹಾಗೂ ಡಿ-ಮಸ್ಟರಿಂಗ್ ನಡೆಯಲಿದೆ. ಮತದಾನದ ನಂತರ ವಿದ್ಯುನ್ಮಾನ ಮತಯಂತ್ರಗಳನ್ನು ಎಣಿಕೆ ದಿನದವರೆಗೆ ಸುರಕ್ಷತೆಯಲ್ಲಿಡಲು ಭದ್ರತಾ ಕೊಠಡಿ ಮತ್ತು ಎಣಿಕೆ ಕೊಠಡಿಗಳನ್ನು ನಗರದ ವಿಶ್ವವಿದ್ಯಾಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕ ದೂರುಗಳನ್ನು ಸ್ವೀಕರಿಸಲು 1950ಗೆ ಕರೆ ಮಾಡಬಹುದು. ಇ-ಮೇಲ್:deo.mandyal@gmail.com, ವೆಬ್ಸೈಟ್ mandya.nic.in ಸಂಪರ್ಕಿಸಬಹುದು ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಜಿಪಂ ಸಿಇಒ ಶಾಂತಾ ಎಲ್.ಹುಲ್ಮನಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ಯತೀಶ್ ಹಾಜರಿದ್ದರು.