ಬೆಂಗಳೂರು: ವಿಧಾನಸಭಾ ಚುನಾವಣಾ ಪ್ರಣಾಳಿಕೆಯಾಗಿ ಕಾಂಗ್ರೆಸ್ ಘೋಷಿಸಿದ್ದ ಗೃಹ ಜ್ಯೋತಿ ಯೋಜನೆ ರಾಜ್ಯದಲ್ಲಿ ವಿದ್ಯುತ್ ಇಲಾಖೆಗೆ ತಲೆನೋವಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದೂ ಬಿಲ್ ಪಾವತಿಸಲು ರಾಜ್ಯದ ಅನೇಕ ಭಾಗಗಳಲ್ಲಿ ಜನರು ನಿರಾಕರಿಸಿದ್ದಾರೆ. ಬೆಂಗಳೂರಿನಲ್ಲಿಯೂ ಜನರ ಬಿಲ್ ಕಟ್ಟಲು ನಿರಾಕರಿಸುತ್ತಿದ್ದು, ಬೆಸ್ಕಾಂ ಹೊಸ ಎಚ್ಚರಿಕೆ ನೀಡಿದೆ. 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡುವ ಭರವಸೆಯನ್ನು ಜಾರಿಗೆ ತರುವ ಹೊಸ ಕಾಂಗ್ರೆಸ್ ಸರ್ಕಾರದ ಭರವಸೆಯನ್ನು ಗಮನದಲ್ಲಿಟ್ಟುಕೊಂಡು ವಿದ್ಯುತ್ ಬಿಲ್ ಪಾವತಿಸದ ಜನರ ಮನವೊಲಿಸುವಲ್ಲಿ ಬೆಸ್ಕಾಂ ಅಧಿಕಾರಿಗಳು ಹೈರಾಣಾಗಿದ್ದಾರೆ. ಸರ್ಕಾರ ತನ್ನ ಐದು ಗ್ಯಾರೆಂಟಿಗಳನ್ನು ಜಾರಿಗೆ ತರುವುದಾಗಿ ಘೋಷಿಸಿದಾಗಿನಿಂದ, ಎಲ್ಲಾ ಮನೆಗಳಿಗೆ 200 ಯೂನಿಟ್ ವಿದ್ಯುತ್ ಉಚಿತ ಎಂದೇ ಜನರು ಭಾವಿಸಿದ್ದಾರೆ. ವಿದ್ಯುತ್ ಬಿಲ್ ಪಡೆದ ಗ್ರಾಹಕರು, ಬಿಲ್ ಪಾವತಿಸಬೇಕೇ ಅಥವಾ ಬೇಡವೇ ಎಂದು ಬೆಸ್ಕಾಂ ಅಧಿಕಾರಿಗಳನ್ನೇ ಪ್ರಶ್ನಿಸುತ್ತಿದ್ದಾರೆ.
ರಾಜ್ಯ ಸರಕಾರ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದೆ ಎಂದು ಹಲವರು ಬಿಲ್ ಪಾವತಿಸಲು ನಿರಾಕರಿಸುತ್ತಿದ್ದಾರೆ. ಮೊದಲ 200 ಯೂನಿಟ್ಗಳಿಗೆ ಬಿಲ್ ಮೊತ್ತವನ್ನು ಕಡಿತಗೊಳಿಸಬೇಕೆಂದು ಕೆಲವರು ಒತ್ತಾಯಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ನಿಗದಿತ ಸಮಯದೊಳಗೆ ಬಿಲ್ ಪಾವತಿಸುವಂತೆ ಬೆಸ್ಕಾಂ ಅಧಿಕಾರಿಗಳು ಸೂಚಿಸಿದ್ದಾರೆ. ಇಲ್ಲದಿದ್ದರೆ ನೀತಿ ನಿರ್ಧಾರದಂತೆ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. 200 ಯೂನಿಟ್ ಉಚಿತ ವಿದ್ಯುತ್ ನೀಡುವ ಬಗ್ಗೆ ಸರ್ಕಾರದಿಂದ ಸ್ಪಷ್ಟತೆ ಇಲ್ಲದಿರುವುದರಿಂದ ನಮ್ಮ ಬಳಿ ಉತ್ತರವಿಲ್ಲ. ಸರ್ಕಾರದ ಆದೇಶದ ಅನುಪಸ್ಥಿತಿಯಲ್ಲಿ, ಬಿಲ್ ಪಾವತಿಸಲು ನಿರಾಕರಿಸುವವರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವಂತೆ ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಬೆಸ್ಕಾಂ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಹದೇವಪ್ಪ ನಿಂಗೂ ಫ್ರೀ, ನಂಗೂ ಫ್ರೀ, ಯಾರೂ ಕರಂಟ್ ಬಿಲ್ ಕಟ್ಟಬೇಕಾಗಿಲ್ಲ: ಟಿಕ್ಟಾಕ್ ವಿಡಿಯೋ ವೈರಲ್ “ಈ ವಿಷಯದ ಬಗ್ಗೆ ಬೆಸ್ಕಾಂಗೆ ಸರ್ಕಾರದಿಂದ ಯಾವುದೇ ಸೂಚನೆಗಳು ಬಂದಿಲ್ಲ ಎಂದು ಅಧಿಕಾರಿ ಹೇಳಿದರು. ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ನಮಗೆ ಹೇಳಿದ್ದಾರೆ. ಆದರೆ, ಇದನ್ನು ನಾವು ಗ್ರಾಹಕರಿಗೆ ಹೇಳಲು ಸಾಧ್ಯವಿಲ್ಲ. ಅವರ ಬಿಲ್ಗಳನ್ನು ಕಟ್ಟುವಂತೆ ನಾವು ಕೇಳುತ್ತಿದ್ದೇವೆ. ಜನರ ಕಾಳಜಿಯನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಆದರೆ ನಾವು ಅಸಹಾಯಕರಾಗಿದ್ದೇವೆ” ಎಂದು ಅಧಿಕಾರಿ ಹೇಳಿದ್ದಾರೆ.