ಸಕಲೇಶಪುರ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇದ ಮಾಡಲು ಮುಂದಾಗಿರುವುದಕ್ಕೆ ಆಕ್ರೋಶಗೊಂಡಿರುವ ಭಜರಂಗದಳ ಕಾರ್ಯಕರ್ತರು ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್ ವಿರುದ್ದ ಘೋಷಣೆ ಹಾಕಿ, ಹನುಮಾನ್ ಚಾಲೀಸ್ ಪಠಣ ಮಾಡಿ, ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಹಾಕುವ ಮುಖಾಂತರ ಪ್ರತಿಭಟನೆ ಮಾಡಿದರು.
ಈ ಸಂದರ್ಭದಲ್ಲಿ ಬಜರಂಗದಳದ ಮುಖಂಡ ರಘು ಸಂಕ ದೇಶಭಕ್ತ ಸಂಘಟನೆ ಭಜರಂಗದಳವನ್ನು ಕಾಂಗ್ರೆಸ್ ಯಾವುದೆ ಕಾರಣಕ್ಕೂ ನಿಷೇದ ಮಾಡಲು ಸಾಧ್ಯವಿಲ್ಲ. ಏಕೆಂದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಕಾಂಗ್ರೆಸ್ ನಲ್ಲಿರುವ ರಾಷ್ಟçಭಕ್ತ ಹಿಂದೂಗಳು ಕಾಂಗ್ರೆಸ್ ತೊರೆಯಿರಿ ಎಂದು ಮನವಿ ಮಾಡುತ್ತೇನೆ. ತಾಲೂಕಿನಲ್ಲಿ ಸುಮಾರು 1000ಕ್ಕೂ ಹೆಚ್ಚು ಮನೆಗಳ ಮುಂದೆ ಇದು ಭಜರಂಗದಳದವರ ಮನೆ, ಕಾಂಗ್ರೆಸ್ಸಿಗರಿಗೆ ಪ್ರವೇಶವಿಲ್ಲ ಎಂಬ ಭಿತ್ತಿ ಪತ್ರ ಅಂಟಿಸಿ ಕಾಂಗ್ರೆಸ್ ವಿರುದ್ದ ಅಭಿಯಾನ ಮಾಡುತ್ತೇವೆ ಎಂದರು.