ರಾಮನಗರ: ಕೃಷಿಗಾಗಿ ತಂದಿದ್ದ ಮನೆಯಲ್ಲಿದ್ದ ಕೀಟನಾಶಕ (ದ್ರಾವಕ) ವನ್ನು ಜ್ಯೂಸ್ ಎಂದು ಕುಡಿದು ಮಗು ಮೃತಪಟ್ಟಿರುವ ಘಟನೆ ರಾಮನಗರ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ. ಯಶ್ವಿಕ್ (2) ಮೃತ ಮಗು ಎಂದು ಗುರುತಿಸಲಾಗಿದೆ. ಕೃಷ್ಣಾಪುರ ಗ್ರಾಮದ ಪುಷ್ಪ ಹಾಗೂ ಹನುಮಂತ ಎಂಬ ದಂಪತಿಯ ಏಕೈಕ ಪುತ್ರನಾದ ಯಶ್ವಿಕ್, ತನ್ನ ಮನೆಯಲ್ಲಿದ್ದ ಕೀಟನಾಶಕವನ್ನು ಜ್ಯೂಸ್ ಎಂದು ತಿಳಿದು ಸೇವಿಸಿದ್ದಾನೆ.
ಮೃತ ಕಂದಮ್ಮನ ತಂದೆ, ತನ್ನ ಬೆಳೆಗೆ ಕೀಟನಾಶಕವನ್ನು ಸಿಂಪಡಿಸಲು ದ್ರಾವಕವನ್ನು ತಂದಿಟ್ಟಿದ್ದರು. ಬೆಳೆ ಕೀಟನಾಶಕ ಸಿಂಪಡಿಸಿ ಬಾಕಿ ಉಳಿದಿದ್ದ ಔಷಧಿಯನ್ನು ಬಾಟಲಿಯೊಂದಕ್ಕೆ ಹಾಕಿ ಇಟ್ಟಿದ್ದರು. ಈ ಬಾಟಲಿಯಲ್ಲಿ ಇರುವುದು ಜ್ಯೂಸ್ ಎಂದು ಭಾವಿಸಿದ ಮಗು ಕೀಟನಾಶಕ ಕುಡಿದಿದೆ. ದ್ರಾವಕ ಕುಡಿದ ಹೊಟ್ಟೆನೋ ವಿನಿಂದ ಆಳುತಿದ್ದ ಮಗುವನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೀಟನಾಶಕ ಕುಡಿದು ಅಸ್ವಸ್ಥವಾಗಿದ ಮಗುವಿಗೆ ತಕ್ಷಣವೇ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಿದರೂ ಸಹ ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ. ಇನ್ನು ಪುಟ್ಟ ಕಂದಮ್ಮನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.