ರಾಜ್ಯದಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಹೀಗಾಗಿ ಕರ್ನಾಟಕ ಹೊರತಾಗಿ ಬೇರೆ ರಾಜ್ಯದಲ್ಲಿರುವ ಕಾಂಗ್ರೆಸ್ ಅಭಿಮಾನಿಗಳು ಸಂಭ್ರಮಿಸಿದ್ದು ಕಂಡು ಬಂದಿದೆ. ಹೊಸದಿಲ್ಲಿಯ ಎಐಸಿಸಿ ಹೆಚ್ಕ್ಯುನಲ್ಲಿ ಕಾಂಗ್ರೆಸ್ ಬೆಂಬಲಿಗರು ಹಾಗೂ ಸಂಭ್ರಮಿಸುತ್ತಿರುವುದು ಕಂಡು ಬಂದಿದೆ. ಕಾಂಗ್ರೆಸ್ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದು ‘ಕೈ’ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ಲಿಂಗಾಯತರ ಕಣದಲ್ಲಿ ಕಾಂಗ್ರೆಸ್ಗೆ ಮುನ್ನಡೆ ರಾಜ್ಯದ ಕಿತ್ತೂರು ಕರ್ನಾಟಕದಲ್ಲಿ ಕಾಂಗ್ರೆಸ್ 2018ರಲ್ಲಿ 20 ಸ್ಥಾನ ಗಳಿಸಿತ್ತು. ಈ ಬಾರಿ ಸದ್ಯ 32 ಸ್ಥಾನ ಪಡೆದುಕೊಳ್ಳುವತ್ತ ದಾಪುಗಾಲು ಹಾಕುತ್ತಿದೆ. ಲಿಂಗಾಯತರೇ ನೀರ್ಣಾಯಕವಾದ ಈ ಭಾಗದಲ್ಲಿ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿ ಬಿಜೆಪಿ ತೊರೆದಿದ್ದು ಕಾಂಗ್ರೆಸ್ಗೆ ವರದಾನವಾಗಿದೆ. ಲಿಂಗಾಯತ ಮಹಾನಾಯಕ ಬಿ.ಎಸ್.ಯಡಿಯೂರಪ್ಪನನ್ನು ಸಿಎಂ ಸ್ಥಾನದಿಂದ ಇಳಿಸಿರುವುದು ಸಹ ಕಿತ್ತೂರು ಕರ್ನಾಟಕದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಲು ಸಹಾಯವಾಗಿದೆ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ.
ಶಿಮ್ಲಾದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಟೆಂಪಲ್ ರನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂದು ಶಿಮ್ಲಾ ಜಖು ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇಂದು ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳಲಿದ್ದು ಬಹುತೇಕ ರಾಜ್ಯ ನಾಯಕರು ದೇವಸ್ಥಾನಕ್ಕೆ ಬೆಳಿಗ್ಗೆಯಿಂದಲೇಭೇಟಿ ನೀಡುತ್ತಿದ್ದಾರೆ. ಜೊತೆಗೆ ಕೇಂದ್ರ ನಾಯಕರೂ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವುದು ಕಂಡು ಬಂದಿದೆ.